ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮನೆ,ಕಚೇರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆಗಳಲ್ಲಿ ಸಿಬಿಐ ದಾಳಿ

October 5, 2020
10:48 AM

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಬಿಐ ದಾಳಿ ಮಾಡಿದೆ.

ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲದಹಳ್ಳಿಯಲ್ಲಿರುವ ನಿವಾಸದ ಮೇಲೆಯೂ ದಾಳಿಯನ್ನು ನಡೆಸಲಾಗಿದೆ. 7 ಸಿಬಿಐ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ಕನಕಪುರದ ನಿವಾಸಕ್ಕೆ ಆಗಮಿಸಿದ್ದಾರೆ. ಡಿ. ಕೆ. ಶಿವಕುಮಾರ್ ಸದಾಶಿವನಗರ ನಿವಾಸ, ಕನಕಪುರ ನಿವಾಸ ಮತ್ತು ಡಿ. ಕೆ. ಸುರೇಶ್ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಸದಾಶಿವನಗರ ನಿವಾಸದಲ್ಲಿ ಐವರು ಸಿಬಿಐ ಅಧಿಕಾರಿಗಳು ಇದ್ದಾರೆ.ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.

 

 

ಕಾಂಗ್ರೆಸ್‌ ಟೀಕೆ
ಕೆಪಿಸಿಸಿ ಅಧ್ಯಕ್ಷರ ಮನೆಗೆ ದಾಳಿ ನಡೆಸಿದ್ದನ್ನು ಕಾಂಗ್ರೆಸ್ ನಾಯಕರು  ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು, ಈ ದಾಳಿ ಬಿಜೆಪಿ ಸರ್ಕಾರದ ಪ್ರತೀಕಾರದ ರಾಜಕೀಯ ಎಂದು ಟೀಕಿಸಿದ್ದಾರೆ.ಡಿ ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror