ಸವಣೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆ ಹಾಗೂ ಅಂಕತ್ತಡ್ಕ ಅಂಗನವಾಡಿ ಕೇಂದ್ರದ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಅಭಿಯಾಣ ಕಾರ್ಯಕ್ರಮವು ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಾಲ್ತಾಡಿ ಶಾಖೆಯ ನವೋದಯ ಸಭಾಂಗಣದಲ್ಲಿ ನಡೆಯಿತು.
ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾ„ಕಾರಿ ದೀಪಕ್ ರೈ ಕಾರ್ಯಕ್ರಮ ಉದ್ಘಾಟಿಸಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.ಬಾಲವಿಕಾಸ ಸಮಿತಿಯ ಅಧ್ಯಕ್ಷೆ ,ಸವಣೂರು ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಾಲ್ತಾಡಿ ಶಾಖಾ ವ್ಯವಸ್ಥಾಪಕರಾದ ಜಯರಾಮ ಕೆ, ಅಂಕತ್ತಡ್ಕ ಪ್ರಾಥಮಿಕ ಶಾಲೆಯ ಶಿಕ್ಷಕಿ ವಸಂತಿ, ನಿವೃತ್ತ ಮುಖ್ಯ ಶಿಕ್ಷಕಿ ಪಾರ್ವತಿ ಉಪಸ್ಥಿತರಿದ್ದರು.
ಅಂಗನವಾಡಿ ಮಕ್ಕಳು ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆಯ ಆರೋಗ್ಯ ಸಹಾಯಕಿ ಅಕ್ಷತಾ ಸ್ವಾಗತಿಸಿದರು. ಆಶಾಕಾರ್ಯಕರ್ತೆ ಶ್ಯಾಮಲ ರೈ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರೇಮ ಹಾಗೂ ಆಶಾಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಸಹಕರಿಸಿದರು. ಕೊನೆಯದಾಗಿ ವಿವಿಧ ಪೌಷ್ಟಿಕ ಆಹಾರಗಳ ತಿನಿಸುಗಳ ಪ್ರಾತ್ಯಕ್ಷಿಕೆ ನಡೆಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…