ಸುಳ್ಯ: ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ ನಿಷ್ಠಾವಂತ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಸಂಚು ನಡೆದಿದೆ ಎಂದು ಜೆಡಿಎಸ್ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಅಸಮರ್ಪಕ ಮತ್ತು ಅಸಂತುಲಿತ ಮತ್ತು ರಾಜ್ಯದ ಬಗ್ಗೆ ಕಾಳಜಿಯೇ ಇಲ್ಲದ ಸಚಿವ ಸಂಪುಟ ಇದಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಚಿವರೇ ಇಲ್ಲ. ಶಿಕ್ಷಣ, ಬ್ಯಾಂಕಿಂಗ್, ಆರೋಗ್ಯ ಸೇರಿ ಬೆಳವಣಿಗೆಯ ಉತ್ತುಂಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಒಬ್ಬ ಸಚಿವರನ್ನು ನೀಡದೆ ಕಡೆಗಣಿಸಿದೆ. ಸಚಿವರಿಲ್ಲದೆ ಇರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ. ಈ ರೀತಿ ಕೆಲವೇ ಕೆಲವು ಜಿಲ್ಲೆಗಳಿಗೆ ಮಾತ್ರ ಸಚಿರನ್ನು ನೀಡಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಅಂಗಾರರನ್ನು ಸಚಿವರನ್ನು ಮಾಡಿದರೆ ಸಾಕಷ್ಟು ಅನುದಾನ ಬಂದು ಸುಳ್ಯ ಕ್ಷೇತ್ರ ಉತ್ತಮ ಬೆಳವಣಿಗೆ ಮಾಡುವ ಅವಕಾಶ ಇತ್ತು. ಆದರೆ ಅವರನ್ನು ಕಡೆಗಣಿಸಿ ಇಡೀ ಕ್ಷೇತ್ರದ ಜನರನ್ನು, ಕಾರ್ಯಕರ್ತರನ್ನು ಬಿಜೆಪಿ ಅವಮಾನಿಸಿದೆ. ಅಂಗಾರರ ತತ್ವ, ಸಿದ್ಧಾಂತಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಅವರು ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಬದಿಗಿಟ್ಟು ಸುಳ್ಯ ಕ್ಷೇತ್ರಕ್ಕೆ ಆಗಿರುವ ಅನ್ಯಾಯದ ವಿರುದ್ಧ ಮತ್ತು ಕ್ಷೇತ್ರದ ಅಭ್ಯುದಯದ ದೃಷ್ಟಿಯಿಂದ ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಈ ಅನ್ಯಾಯದ ವಿರುದ್ಧ ಜಿಲ್ಲೆಯ ಮುಖಂಡರಾದ ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಧ್ವನಿ ಎತ್ತಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ದಯಾಕರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಠಿಕಾನ ಉಪಸ್ಥಿತರಿದ್ದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…