ಅಂಗಾರರಿಗೆ ಸಚಿವ ಸ್ಥಾನವಿಲ್ಲ- ಸುಳ್ಯಕ್ಕೆ ಮತ್ತೆ ನಿರಾಸೆ

February 6, 2020
1:22 PM

ಸುಳ್ಯ: ನಿರೀಕ್ಷೆಯಂತೆ ಬಿ‌.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಗುರುವಾರ ಬೆಳಗ್ಗೆ 10 ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ನಿರಂತರ ಆರು ಭಾರಿ ಶಾಸಕರಾದ ಶಾಸಕ ಎಸ್.ಅಂಗಾರ ಸಚಿವರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಸುಳ್ಯ ಜನತೆಗೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ.

ಕಾರಣ ನೂತನ ಸಚಿವರ ಪಟ್ಟಿಯಲ್ಲಿ ಶಾಸಕ ಅಂಗಾರ ಅವರ ಹೆಸರಿಲ್ಲ. ಮೊದಲ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ಅಂಗಾರರಿಗೆ ಸಚಿವ ಸ್ಥಾನ ಖಚಿತ ಎಂದೇ ನಂಬಲಾಗಿತ್ತು. ಆದರೆ ಅಂಗಾರರಿಗೆ ಸಚಿವ ಸ್ಥಾನ ಒಲಿದು ಬರಲಿಲ್ಲ. ಇದರಿಂದ ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದು ಸುಳ್ಯ ಬಿಜೆಪಿ ಅಸಹಕಾರ ಚಳವಳಿ ಘೋಷಣೆ ಮಾಡಿತ್ತು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಸುಳ್ಯದ ಮುಖಂಡರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮುಂದಿರಿಸಿದ್ದರು.

ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡುವುದಿದ್ದರೆ ಅಂಗಾರರಿಗೆ ಪ್ರಥಮ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಆಶ್ವಾಸನೆ ನೀಡಿದ್ದರು. ಆದರೆ ಗುರುವಾರ ಸಚಿವ ಸಂಪುಟ ವಿಸ್ತರಣೆ ಆದಾಗ ದಕ್ಷಿಣ ಕನ್ನಡ ಜಿಲ್ಲೆಗೂ ಮಂತ್ರಸ್ಥಾನವಿಲ್ಲ. ಅಂಗಾರರಿಗೂ ಸಚಿವ ಸ್ಥಾನ ಇಲ್ಲ ದೊರೆಯಲಿಲ್ಲ. ಆರು ಬಾರಿ ಶಾಸಕರಾದರೂ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅಂಗಾರ ಅವರನ್ನು ಕಡೆಗಣಿಸಿರುವುದಕ್ಕೆ ಸುಳ್ಯದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror