ಸುಳ್ಯ: ನಿರೀಕ್ಷೆಯಂತೆ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಗುರುವಾರ ಬೆಳಗ್ಗೆ 10 ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ನಿರಂತರ ಆರು ಭಾರಿ ಶಾಸಕರಾದ ಶಾಸಕ ಎಸ್.ಅಂಗಾರ ಸಚಿವರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಸುಳ್ಯ ಜನತೆಗೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ.
ಕಾರಣ ನೂತನ ಸಚಿವರ ಪಟ್ಟಿಯಲ್ಲಿ ಶಾಸಕ ಅಂಗಾರ ಅವರ ಹೆಸರಿಲ್ಲ. ಮೊದಲ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ಅಂಗಾರರಿಗೆ ಸಚಿವ ಸ್ಥಾನ ಖಚಿತ ಎಂದೇ ನಂಬಲಾಗಿತ್ತು. ಆದರೆ ಅಂಗಾರರಿಗೆ ಸಚಿವ ಸ್ಥಾನ ಒಲಿದು ಬರಲಿಲ್ಲ. ಇದರಿಂದ ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದು ಸುಳ್ಯ ಬಿಜೆಪಿ ಅಸಹಕಾರ ಚಳವಳಿ ಘೋಷಣೆ ಮಾಡಿತ್ತು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಸುಳ್ಯದ ಮುಖಂಡರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮುಂದಿರಿಸಿದ್ದರು.
ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡುವುದಿದ್ದರೆ ಅಂಗಾರರಿಗೆ ಪ್ರಥಮ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಆಶ್ವಾಸನೆ ನೀಡಿದ್ದರು. ಆದರೆ ಗುರುವಾರ ಸಚಿವ ಸಂಪುಟ ವಿಸ್ತರಣೆ ಆದಾಗ ದಕ್ಷಿಣ ಕನ್ನಡ ಜಿಲ್ಲೆಗೂ ಮಂತ್ರಸ್ಥಾನವಿಲ್ಲ. ಅಂಗಾರರಿಗೂ ಸಚಿವ ಸ್ಥಾನ ಇಲ್ಲ ದೊರೆಯಲಿಲ್ಲ. ಆರು ಬಾರಿ ಶಾಸಕರಾದರೂ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅಂಗಾರ ಅವರನ್ನು ಕಡೆಗಣಿಸಿರುವುದಕ್ಕೆ ಸುಳ್ಯದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…