ಸುಳ್ಯ: ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ -ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರ ಸಭೆಯನ್ನು ಆ.21 ರಂದು 10.30 ಕ್ಕೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದೆ ಎಂದು ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.
ಸುಳ್ಯದ ಪ್ರಾಮಾಣಿಕ ದಕ್ಷ ಹಾಗೂ ಪಕ್ಷ ನಿಷ್ಠ, ಆರನೇ ಬಾರಿ ಸತತ ಗೆಲುವು ಸಾಧಿಸಿದ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನವು ಕೈ ತಪ್ಪಿರುವುದು ಪಕ್ಷ- ಸಂಘಟನೆಯ ವಿಚಾರ, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ದುಡಿದಂತಹ ಕಾರ್ಯಕರ್ತರಿಗೆ ಬಹಳಷ್ಟು ನೋವುಂಟಾಗಿದೆ. ಇನ್ನು ಮುಂದಿನ ನಮ್ಮ ತೀರ್ಮಾನಗಳ ಬಗ್ಗೆ ಆಲೋಚಿಸಲು ಸಭೆ ಕರೆಯಲಾಗಿದೆ. ಆದ್ದರಿಂದ ಎಲ್ಲರೂ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿಸಿದ್ದಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…