ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೊಡಗ್‍ರ ಸಿಪಾಯಿ’ ಚಿತ್ರ ಆಯ್ಕೆ

October 27, 2019
6:24 PM

ಮಡಿಕೇರಿ : ಇತ್ತೀಚಿಗೆ ಬಿಡುಗಡೆಯಾದ ‘ಕೊಡಗ್‍ರ ಸಿಪಾಯಿ’ ಕೊಡವ ಚಲನಚಿತ್ರ ಕೊಲ್ಕತ್ತಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ ಎಂದು ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement

ಮೈಸೂರು ಕೊಡವ ಸಮಾಜದಲ್ಲಿ “ಕೊಡಗ್‍ರ ಸಿಪಾಯಿ” ಚಲನಚಿತ್ರದ 51ನೇ ಪ್ರದರ್ಶನದ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವಗಲೇ ಕೊಡವ ಚಲನಚಿತ್ರವೊಂದು ಪ್ರದರ್ಶನಕ್ಕೆ ಅವಕಾಶ ಪಡೆದಿರುವುದು ಹೆಮ್ಮೆಯ ವಿಚಾರ ಎಂದರು.

Advertisement

ನ.8 ರಿಂದ 15ರ ವರೆಗೆ ಕೊಲ್ಕತ್ತಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ‘ಕೊಡಗ್‍ರ ಸಿಪಾಯಿ’ ಪ್ರದರ್ಶನಗೊಳ್ಳಲಿದೆ. ತಾವು ನಿರ್ಮಿಸಿದ ‘ಬಾಕೆಮನೆ’ ಕೊಡವ ಚಲನ ಚಿತ್ರ ಕೂಡ ಈ ಹಿಂದೆ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿತ್ತು. ಇದೀಗ ಅಪರೂಪದ ಉಪ ಭಾಷೆಗಳ ವಿಭಾಗದ ಚಲನಚಿತ್ರಗಳಲ್ಲಿ ‘ಕೊಡಗ್‍ರ ಸಿಪಾಯಿ’ ಅವಕಾಶ ಪಡೆದಿರುವುದು ಅತ್ಯಂತ ಹರ್ಷದಾಯಕ ಎಂದು ಪ್ರಕಾಶ್ ಕಾರ್ಯಪ್ಪ ತಿಳಿಸಿದರು.

Advertisement

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಕೇಕಡ ಬೆಳ್ಯಪ್ಪ ಅವರು, ಕೊಡಗ್‍ರ ಸಿಪಾಯಿ ಚಲನಚಿತ್ರ ನಿರ್ಮಾಣದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರಾದ ಕಲ್ಯಾಟಂಡ ಬಿ. ಗಣಪತಿ ಮಾತನಾಡಿ, ಸಿನಿಮಾ ರಂಗದ ಮೂಲಕವು ಕೊಡವ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಯಾಗುತ್ತಿರುವುದು ಶ್ಲಾಘನೀಯವೆಂದರು.

Advertisement

ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗ್‍ರ ಸಿಪಾಯಿ ಚಿತ್ರದ ನಾಯಕ ನಟ ಅಥ್ಲಿಟ್ ಅರ್ಜುನ್ ದೇವಯ್ಯ ಅವರುಗಳು ಮಾತನಾಡಿದರು. ಲೌಲಿ ಪ್ರಾರ್ಥಿಸಿ, ರವಿ ಬೆಳ್ಯಪ್ಪ ಸ್ವಾಗತಿಸಿದರು.

Advertisement

ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ತೇಲಪಂಡ ಕವನ್ ಕಾರ್ಯಪ್ಪ, ಸಾಹಿತ್ಯ ಕ್ಷೇತ್ರದ ಪ್ರೋತ್ಸಾಹಕ್ಕಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಕೊಡಗ್‍ರ ಸಿಪಾಯಿ ಸಿನಿಮಾಕ್ಕೆ ಕಥೆ ಒದಗಿಸಿದ ಉಳುವಂಗಡ ಕಾವೇರಿ ಉದಯ, ಚಿತ್ರದ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ನಟರುಗಳಾದ ಅರ್ಜುನ್ ದೇವಯ್ಯ, ತೇಜಸ್ವಿನಿ ಶರ್ಮ ಹಾಗೂ ವಾಂಚಿರ ವಿಠಲ್ ನಾಣಯ್ಯ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ನಿರ್ಮಾಪಕ ಹಾಗೂ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಅರ್ಜುನ್ ದೇವಯ್ಯ ಅವರಿಗೆ ಪೀಚೆಕತ್ತಿ ನೀಡಿ ಸನ್ಮಾನಿಸಿದರು. ಮೈಸೂರು ಕೊಡವ ಸಮಾಜದ ಮಾಜಿ ಅಧ್ಯಕ್ಷ ಡಾ.ಆದೆಂಗಡ ಕುಟ್ಟಪ್ಪ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror