ಧರ್ಮಸ್ಥಳ: ಶುದ್ಧವಾದ ಗಾಳಿ ಮತ್ತು ನೀರು ದೇವರು ನಮಗೆ ಕೊಟ್ಟ ಸೌಭಾಗ್ಯವಾಗಿದೆ. ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ ಎಂದು ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ದ.ಕ.ಜಿಲ್ಲಾಅಂತರ್ಜಲ ಕಛೇರಿಯ ಆಶ್ರಯದಲ್ಲಿ ಆಯೋಜಿಸಿದ ಸಾರ್ವಜನಿಕ ಅಂತರ್ಜಲ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೊಳವೆ ಬಾವಿಗಳಿಂದಾಗಿ ಭೂಮಿಯ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂಗುಗುಂಡಿಗಳ ಮೂಲಕ ನೀರನ್ನು ಭೂಮಿಗೆ ಇಂಗಿಸುವ ಮೂಲಕ ನೀರಿನ ಸದ್ಬಳಕೆ ಮಾಡಬೇಕು. ಹನಿ ನೀರಾವರಿಯಿಂದಲೂ ಕಡಿಮೆ ನೀರು ಬಳಸಿ ಹೆಚ್ಚು ಕೃಷಿ ಮಾಡಬಹುದು. ಕಳೆದ 15 ವರ್ಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಮಳೆ ಬರುವ ರೀತಿಯಲ್ಲಿ ವ್ಯತ್ಯಾಸವಾಗಿದೆ ಎಂದು ಅವರು ಹೇಳಿದರು.
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಎ.ಪಿ.ಎಂ.ಸಿ.ಅಧ್ಯಕ್ಷ ಕೇಶವ ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ, ಯೋಜನಾಧಿಕಾರಿ ಜಯಕರ ಶೆಟ್ಟಿ, ಉಡುಪಿಯ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಭೂ ವಿಜ್ಞಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ್ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದರು. ರತ್ನಶ್ರೀ,ಜೋಸೆಫ್‍ಜಿ.ಎಮ್. ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಉಮೇಶ್ ಕೆ. ಸ್ವಾಗತಿಸಿದರು. ಪ್ರಫುಲ್ಲಾ ಧನ್ಯವಾದವಿತ್ತರು. ಚಂದ್ರಿಕಾ ಕಾರ್ಯಕ್ರಮ ನಿರ್ವಹಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…