“ಅಂಫಾನ್” ಚಂಡಮಾರುತ | ಕರಾವಳಿ ಜಿಲ್ಲೆಯಲ್ಲಿ ಮಳೆ ಸೂಚನೆ | 3 ದಿನಗಳ ಕಾಲ YELLOW Alert…! |

May 15, 2020
2:15 PM

ಹವಾಮಾನ ಹೈಲೈಟ್ಸ್ :

Advertisement
Advertisement

# ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಪ್ರಭಾವ ಹೆಚ್ಚಿಸಿದ ಅಂಫಾನ್ ಚಂಡಮಾರುತ

Advertisement

# ಮೇ 15  ರಿಂದ 3 ದಿನಗಳ ಕಾಲ ಮಳೆ ಸಾಧ್ಯತೆ ,  ಅಂಡಮಾನ್, ಒಡಿಶಾ, ಬಂಗಾಳದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ

# ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮೇ 17 ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ,  ಬಿರುಗಾಳಿ ಎಚ್ಚರಿಕೆ ನೀಡಲಾಗಿದೆ

Advertisement

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಲಕ್ಷಣಗಳು ಹೆಚ್ಚಾಗಿದೆ. ಕಳೆದ 3 ದಿನಗಳಿಂದ ವಾಯುಭಾರ ಕುಸಿತದ ಕಾರಣದಿಂದ ಸಮುದ್ರದಲ್ಲಿ  ಮೇಲ್ಮೈ ಸುಳಿಗಾಳಿ ಕಂಡುಬಂದಿತ್ತು. ಇದೀಗ ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ “ಅಂಫಾನ್” ಚಂಡಮಾರುತವು ಕರಾವಳಿ ಪ್ರದೇಶಗಳಲ್ಲೂ  ಪ್ರಭಾವ ಬೀರಲಿದೆ.

ಈಗಿನ ಅಂದಾಜು ಪ್ರಕಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಭಾರೀ ಮಳೆ ಬೀಳಲಿದ್ದು ಕರಾವಳಿಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.  ಈ ಕಾರಣಕ್ಕಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ “ಯಲ್ಲೋ ಅಲರ್ಟ್” ಘೋಷಿಸಿದೆಯಲ್ಲದೆ 8 ರಾಜ್ಯಗಳು ಮತ್ತು ಕೇಂದ್ರ ಪ್ರಾಂತ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಎಚ್ಚರಿಕೆ ರವಾನಿಸಿದೆ.

Advertisement

ಮೇ 15  ರಿಂದ ದಕ್ಷಿಣ ಮತ್ತು ಮಧ್ಯ ಬಂಗಾಳಕೊಲ್ಲಿಗೆ ಹೋಗದಂತೆ ಮೀನುಗಾರರಿಗೆ ಸೂಚಿಸಲಾಗಿದೆ ಎಂದು ಐಎಂಡಿ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮೇ 17 ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 3 ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನೊಂದಿಗೆ ಗಾಳಿ ಸಹಿತ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಂಫಾನ್ ಚಂಡಮಾರುತವು ತನ್ನ ಪ್ರಭಾವ ಹೆಚ್ಚಿಸಿದರೆ  ಈ ಬಾರಿಯ ಮುಂಗಾರು  ಮಳೆಯ ಮೇಲೆ ಪರಿಣಾಮ ಬೀರಲಿದೆ.

Advertisement

ಇಂದು ಮತ್ತು ನಾಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ, ಮಂಗಳವಾರ ಕರಾವಳಿ ಒಡಿಶಾದ ಕೆಲವು ಭಾಗಗಳಲ್ಲಿ ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಬುಧವಾರ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ತಿಳಿಸಿದೆ.

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.
April 25, 2024
2:39 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror