ಹವಾಮಾನ ಹೈಲೈಟ್ಸ್ :
# ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಪ್ರಭಾವ ಹೆಚ್ಚಿಸಿದ ಅಂಫಾನ್ ಚಂಡಮಾರುತ
Advertisement# ಮೇ 15 ರಿಂದ 3 ದಿನಗಳ ಕಾಲ ಮಳೆ ಸಾಧ್ಯತೆ , ಅಂಡಮಾನ್, ಒಡಿಶಾ, ಬಂಗಾಳದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ
# ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮೇ 17 ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ, ಬಿರುಗಾಳಿ ಎಚ್ಚರಿಕೆ ನೀಡಲಾಗಿದೆ
Advertisement
ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಲಕ್ಷಣಗಳು ಹೆಚ್ಚಾಗಿದೆ. ಕಳೆದ 3 ದಿನಗಳಿಂದ ವಾಯುಭಾರ ಕುಸಿತದ ಕಾರಣದಿಂದ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಂಡುಬಂದಿತ್ತು. ಇದೀಗ ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ “ಅಂಫಾನ್” ಚಂಡಮಾರುತವು ಕರಾವಳಿ ಪ್ರದೇಶಗಳಲ್ಲೂ ಪ್ರಭಾವ ಬೀರಲಿದೆ.
ಈಗಿನ ಅಂದಾಜು ಪ್ರಕಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಭಾರೀ ಮಳೆ ಬೀಳಲಿದ್ದು ಕರಾವಳಿಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಕಾರಣಕ್ಕಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ “ಯಲ್ಲೋ ಅಲರ್ಟ್” ಘೋಷಿಸಿದೆಯಲ್ಲದೆ 8 ರಾಜ್ಯಗಳು ಮತ್ತು ಕೇಂದ್ರ ಪ್ರಾಂತ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಎಚ್ಚರಿಕೆ ರವಾನಿಸಿದೆ.
ಮೇ 15 ರಿಂದ ದಕ್ಷಿಣ ಮತ್ತು ಮಧ್ಯ ಬಂಗಾಳಕೊಲ್ಲಿಗೆ ಹೋಗದಂತೆ ಮೀನುಗಾರರಿಗೆ ಸೂಚಿಸಲಾಗಿದೆ ಎಂದು ಐಎಂಡಿ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮೇ 17 ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 3 ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನೊಂದಿಗೆ ಗಾಳಿ ಸಹಿತ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಂಫಾನ್ ಚಂಡಮಾರುತವು ತನ್ನ ಪ್ರಭಾವ ಹೆಚ್ಚಿಸಿದರೆ ಈ ಬಾರಿಯ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಲಿದೆ.
ಇಂದು ಮತ್ತು ನಾಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ, ಮಂಗಳವಾರ ಕರಾವಳಿ ಒಡಿಶಾದ ಕೆಲವು ಭಾಗಗಳಲ್ಲಿ ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಬುಧವಾರ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ತಿಳಿಸಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…