Advertisement
ಜಿಲ್ಲೆ

ಅಂಬಿಕಾದಲ್ಲಿ ಸಿ.ಎ. ಕೋಚಿಂಗ್ ಉದ್ಘಾಟನೆ

Share

ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ಇದೆ. ಆದರೆ ಕೇವಲ ಎರಡು ಲಕ್ಷವಷ್ಟೇ ಪೂರೈಕೆಯಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಮಾತಾ-ಪಿತ, ಗುರುಹಿರಿಯರ ಆಶೀರ್ವಾದದಿಂದ ನೀವೆಲ್ಲಾ ಶ್ರದ್ಧೆಯಿಂದ ಅಭ್ಯಾಸ ನಡೆಸಿ ದೇಶದ ಅವಶ್ಯಕತೆಯ ಪೂರ್ತಿಗಾಗಿ ಛಲದಿಂದ ಕೋರ್ಸ್ ಪೂರ್ತಿಗೊಳಿಸಿ ಎಂದು ಪುತ್ತೂರಿನ ಪ್ರಸಿದ್ಧ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಮ ಭಟ್ ಹೇಳಿದರು.

ಅವರು  ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸಿ.ಎ. ಕೋಚಿಂಗ್ ತರಗತಿಯನ್ನು ಉದ್ಘಾಟಿಸಿದರು.  ಅಂಬಿಕಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ  ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ವಾನ್ ಡಾ.ಸೊಂದಾ ಭಾಸ್ಕರ ಭಟ್ ಸಿ.ಎ. ಫೌಂಡೇಶನ್ ಕೋರ್ಸ್‍ನ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜ, ತರಬೇತುದಾರರಾದ ಯಶಸ್ವಿನಿ ಕೆ ಅಮೀನ್, ಅನೀಶ್ ದೇವಾಡಿಗ, ಉಪಪ್ರಾಂಶುಪಾಲರಾದ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಶರಣ್ಯ, ಗ್ರೀಷ್ಮಾ, ಮೇಘನಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

17 minutes ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

4 hours ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

12 hours ago

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?

ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್‌ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…

15 hours ago

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!

ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…

21 hours ago