ಪುತ್ತೂರು : ಅಂಬಿಕಾ ಮಹಾವಿದ್ಯಾಲಯವು ವಿದ್ಯುಕ್ತವಾಗಿ ಆರಂಭಗೊಂಡಿತು. ಸಮಾರಂಭದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಸದಸ್ಯರೂ ಆದ ಸುರೇಶ ಶೆಟ್ಟಿ ವಿಧ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತತ್ವಶಾಸ್ತ್ರವನ್ನೊಳಗೊಂಡ ಪಠ್ಯದ ಮಹತ್ವ, ಪ್ರತಿ ವಿದ್ಯಾರ್ಥಿಯ ಬಗ್ಗೆ ವ್ಯಕ್ತಿಗತ ಕಾಳಜಿಯ ವಿಚಾರ, ಮಹಾ ವಿದ್ಯಾಲಯದ ಸ್ಥಾಪನೆಯ ಸದುದ್ದೇಶವನ್ನು ತಿಳಿಸುತ್ತಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜರು ಕಾಲೇಜಿನ ಚಟುವಟಿಕೆಗಳ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ಪ್ರಸನ್ನ ಭಟ್ ಶುಭ ಹಾರೈಸಿದರು. ತತ್ವಶಾಸ್ತ್ರದ ಸ್ನಾತಕೋತ್ತರ ಪದವೀಧರ ರಾಮಕೃಷ್ಣ ಮಠದ ರಂಜನ್ ಅವರು ತತ್ವಶಾಸ್ತ್ರದ ಮಹತ್ವವನ್ನು ತಿಳಿಸಿದರು.
ಉಪನ್ಯಾಸಕಿ ಶ್ವೇತಾ, ಪ್ರಾಚಾರ್ಯೆ ರಾಜಶ್ರೀ ನಟ್ಟೋಜ ಇವರು ವಿದ್ಯಾರ್ಥಿನಿಯರನ್ನು ಹಾಗೂ ಸಂಚಾಲಕರು ಮತ್ತು ಸುರೇಶ ಶೆಟ್ಟರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.
ಶ್ರೀಕೃಷ್ಣ ಎಸ್ ನಟ್ಟೋಜ ಪ್ರಾರ್ಥಿಸಿದರು. ಉಪನ್ಯಾಸಕ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…