ಪುತ್ತೂರು : ಬಪ್ಪಳಿಗೆಯ ಅಂಬಿಕಾ ಬಾಲ ವಿದ್ಯಾಲಯದಲ್ಲಿ ಜ. 5ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು. ಚದುರಂಗವು ಮಾನಸಿಕ ಏಕಾಗ್ರತೆ , ಶೈಕ್ಷಣಿಕ ಪ್ರಗತಿ, ಯೋಜನಾ ಬದ್ಧತೆ, ಸಮಯ ಪ್ರಜ್ಞೆ ಹಾಗೂ ಮನರಂಜನೆ ಎಲ್ಲಾ ವಿಚಾರಗಳಲ್ಲೂ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅತ್ಯಂತ ಉಪಯುಕ್ತ ಕ್ರೀಡೆ, ಭಾರತೀಯತೆಯನ್ನು ಉಳಿಸುವ ಪರಸ್ಪರ ಬಾಂಧವ್ಯವನ್ನು ಬೆಸೆಯುವ ಆಟವಾಗಿದೆ.
ಹತ್ತು ವರುಷಗಳಿಂದ ಈ ಚದುರಂಗ ಸ್ಪರ್ಧಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿರುವ ಅಂಬಿಕಾ ವಿದ್ಯಾ ಸಂಸ್ಥೆ ಹಾಗೂ ಇದರಲ್ಲಿ ಸ್ಪರ್ಧಿಸಲು ಬಂದಿರುವ ಎಲ್ಲಾ ಸ್ಪರ್ಧಿಗಳಿಗೂ ಅಭಿನಂದನೆಗಳು ಹಾಗೂ ಸಿ.ಬಿ.ಎಸ್.ಸಿ ಪಠ್ಯಕ್ರಮ ಅಳವಡಿಸುತ್ತಾ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನೊಂದು ಹೊಸ ಹೆಜ್ಜೆಯನ್ನು ಇಡುವುದಕ್ಕಣಿ ಮಾಡುವ ಈ ಸಂಸ್ಥೆಗೆ ಮತ್ತೊಮ್ಮೆ ಅಭಿನಂದನೆಗಳು ಎಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು ವಿದ್ಯುಕ್ತವಾಗಿ ದೀಪಬೆಳಗಿಸಿ ಉದ್ಘಾಟಿಸಿದ ಮುಖ್ಯ ಅಭ್ಯಾಗತರಾದ ಸುಳ್ಯ ಎನ್.ಎಮ್.ಸಿ ಪಿಯು ಕಾಲೇಜಿನ ಪ್ರಾಚಾರ್ಯೆ ಹರಿಣಿ ಪುತ್ತೂರಾಯ ಶುಭ ಹಾರೈಸಿದರು. ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಗೆಲ್ಲುವ ಆಶಾಭಾವನೆಯಿಂದ ಆಟವಾಡಿ ಎಂದು ಆಡಳಿತ ಮಂಡಳಿಯ ಸದಸ್ಯರಾದ ಸುರೇಶ್ ಶೆಟ್ಟಿ ತಿಳಿಸಿದರು.
ಮಕ್ಕಳ ಸರ್ವಾಂಗೀಣ ಸಾಧನೆಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯು ಒಂದಾಗಿದೆ . ಈ ಕಾರ್ಯಕ್ರಮಕ್ಕೆ ಹತ್ತು ವರ್ಷದಿಂದ ಪೋಷಕರು ಪ್ರೋತ್ಸಾಹವನ್ನು ಕೊಡುತ್ತಿದ್ದಾರೆ. ಇದರಿಂದ ಭಾರತೀಯತೆಯನ್ನು ಉಳಿಸಬೇಕಾಗಿದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಅಂಬಿಕಾ ಸಮೂಹ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿದರು. ಚದುರಂಗ ಸ್ಪರ್ಧೆಯ ರುವಾರಿ ಸತ್ಯಪ್ರಸಾದ್ ಕೋಟೆ , ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಖಜಾಂಜಿ ರಾಜಶ್ರೀ ನಟ್ಟೋಜ , ವಿದ್ಯಾಲಯದ ಪ್ರಾಂಶುಪಾಲರಾದ ಸುಜನೀ ಬೋರ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಮುಂತಾದ ತಾಲೂಕುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.
ವಿದ್ಯಾರ್ಥಿಗಳಾದ ಸುಕೀರ್ತ, ಹಾಗೂ ಶ್ರೀಹರಿ ಪ್ರಾರ್ಥಿಸಿದರು. ಉಪನ್ಯಾಸಕ ರಮೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…