ಅಂಬೇಡ್ಕರ್ ಭವನ ನಿರ್ಮಾಣ ವಿಳಂಬ- ತಹಶೀಲ್ದಾರ್ ಗರಂ

June 15, 2019
3:38 PM

ಸುಳ್ಯ:ಸುಳ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ನಿರ್ಮಾಣ ವಿಳಂಬವಗುತ್ತಿರವ ಬಗ್ಗೆ ತಹಶೀಲ್ದಾರ್ ಎನ್‌.ಎ.ಕುಂಞಿ ಅಹಮ್ಮದ್ ಗರಂ ಆಗಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ನ್ನು ತರಾಟೆಗೆತ್ತಿಕೊಂಡ ಘಟನೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ ನಡಯಿತು.

ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣದ ವಿಳಂಬ ತೀವ್ರ ಚರ್ಚೆಗೆ ಕಾರಣವಾಯಿತು. ಅಂಬೇಡ್ಕರ್ ಭವನ ಕೂಡಲೇ ಪೂರ್ತಿ ಮಾಡಬೇಕು. ಮುಂದಿನ ಅಂಬೇಡ್ಕರ್ ಜಯಂತಿ ಹೊಸ ಅಂಬೇಡ್ಕರ್ ಭವನದಲ್ಲಿ ನಡೆಯಬೇಕು ಎಂದರು. ಈ ಸಂದರ್ಭದಲ್ಲಿ ಕಾಮಗಾರಿಗೆ ಬಿಡುಗಡೆಯಾದ 75 ಲಕ್ಷ ಅನುದಾನದಲ್ಲಿ ಸಮರ್ಪಕ ಕೆಲಸ ಆಗಿಲ್ಲ ಇದರಲ್ಲಿ ಗೋಲ್ ಮಾಲ್ ನಡೆದಿದೆ ಈ ಕುರಿತು ತನಿಖೆ ನಡೆಸಬೇಕು ಎಂದು ಆನಂದ ಬೆಳ್ಳಾರೆ ಮತ್ತಿತರರು ಹೇಳಿದರು. ಈ ಕುರಿತು ತಹಶೀಲ್ದಾರ್ ತನಿಖೆ ನಡೆಸಬೇಕು ಎಂದು ಸಭೆಯಲ್ಲಿ ಒಕ್ಕೊರಲ ಆಗ್ರಹ ವ್ಕಕ್ತವಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಈ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು. ಅಂಬೇಡ್ಕರ್ ಭವನದ ದಾಖಲಾತಿ, ಅನುದಾನ ಬಿಡುಗಡೆ ಮತ್ತು ಕಾಮಗಾರಿ ನಡೆಸಿದ ವಿವರದ ಕುರಿತು ವಿಸ್ತೃತವಾದ ವರದಿಯನ್ನು ನೀಡುವಂತೆ ನಿರ್ಮಿತಿ ಕೇಂದ್ರದ ಇಂಜಿನಿಯರ್ ರಿಗೆ ಆದೇಶ ನೀಡಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಭವಾನಿಶಂಕರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಲಕ್ಷ್ಮೀದೇವಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror