ನೆಲ್ಯಾಡಿ : ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಮಂಗಳವಾರ ಬೆಳಗ್ಗೆ ನೆಲ್ಯಾಡಿ ಬಳಿ ನೆಲ್ಯಾಡಿ ಹೊರಠಾಣೆಯ ಹಾಗೂ ಉಪ್ಪಿನಂಗಡಿ ಠಾಣೆ ಪೊಲೀಸರು ಪತ್ತೆ ಹಚ್ಚಿ 29 ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವೇಗವಾಗಿ ಬರುತ್ತಿದ್ದ ಲಾರಿ ಗುಂಡ್ಯದಲ್ಲಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಅಲ್ಲಿನ ಸಾರ್ವಜನಿಕರು ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ನೆಲ್ಯಾಡಿ ಬೆಥನಿ ಶಾಲಾ ಬಳಿ ಲಾರಿಯನ್ನು ತಡೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿಯಲ್ಲಿದ್ದ ಒಬ್ಬನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel