ಮಡಿಕೇರಿ : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಆಧಾರವಾಗಿಟ್ಟುಕೊಂಡು ಜೂಜಾಟದ ದಂಧೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧವಾಗಿದ್ದರೂ ಕಳೆದ ಕೆಲವು ತಿಂಗಳುಗಳಿಂದ ಪಟ್ಟಣದ ವಿವಿಧೆಡೆ ಕೇರಳ ರಾಜ್ಯದ ಲಾಟರಿ ಅಕ್ರಮವಾಗಿ ಮಾರಾಟವಾಗುತ್ತಿತ್ತು. ಸಾರ್ವಜನಿಕರ ದೂರನ್ನು ಆಧರಿಸಿ ಖಚಿತ ಮಾಹಿತಿಯನ್ವಯ ದಂಧೆ ನಡೆಯುತ್ತಿದ್ದ ಪ್ರದೇಶಗಳಿಗೆ ಏಕಕಾಲಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ವರ್ತಕರಾಗಿರುವ ಕೆ.ಎಂ.ರಶೀದ್, ವಿನೋದ್, ಸಂಶುದ್ದೀನ್ ಹಾಗೂ ಎಂ.ಎಂ.ಮೊಯ್ದು ಬಂಧಿತ ಆರೋಪಿಗಳು. ಕೇರಳ ರಾಜ್ಯದ ಟಿಕೆಟ್‍ನ ಕೊನೆಯ ಮೂರು ಅಂಕಿಗಳ ಫಲಿತಾಂಶದ ಆಧಾರದ ಮೇಲೆ ಜೂಜಾಟ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 30,780 ರೂ. ನಗದು ವಶ ಪಡಿಸಿಕೊಂಡಿರುವ ಪೊಲೀಸರು ಪ್ರಮುಖ ಅರೋಪಿಯ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಜಯಕುಮಾರ್, ವೃತ್ತ ನಿರೀಕ್ಷಕ ಕ್ಯಾತೇಗೌಡ ಅವರುಗಳ ನಿರ್ದೇಶನದ ಮೇರೆಗೆ ಠಾಣಾಧಿಕಾರಿ ಮರಿಸ್ವಾಮಿ, ಎಎಸ್‍ಐ ಮಾದಯ್ಯ, ಸೋಮಯ್ಯ, ಮತ್ತು ಸಿಬ್ಬಂದಿಗಳಾದ ಸುನೀಲ್, ಮೋಹನ್, ಲೋಕೇಶ್, ಗಿರೀಶ್, ಮುನೀರ್, ಈರಪ್ಪ, ರಂಜನ್ ಕುಮಾರ್ ಮತ್ತು ಚಾಲಕ ಯೋಗೇಶ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…