Advertisement
ಧಾರ್ಮಿಕ

ಅಖಂಡ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಘಟಿತರಾಗೋಣ- ದಯಾನಂದ ಕತ್ತಲ್ ಸಾರ್

Share
ಮಂಗಳೂರು: ಭಾರತವು ಜಗತ್ತಿಗೆ ದೇವರಕೋಣೆ.ದೇವರು ಮತ್ತು ದೈವಗಳ‌ ಪೂಜಿಸುವ ಶ್ರೇಷ್ಠವಾದ ಭಾರತೀಯ ಸಂಸ್ಕೃತಿ.ಇಡೀ ಮಾನವ ಕುಲವನ್ನು  ಸಾತ್ತ್ವಿಕಗೊಳಿಸಲು ಮತ್ತು ಜೀವನದ ಉಧ್ದಾರವಾಗಲು ಸನಾತನ ಹಿಂದೂ ಧರ್ಮದಲ್ಲಿ ಹೇಳಲಾಗುವ ಪ್ರತಿಯೊಂದು ಸಿಧ್ಧಾಂತವನ್ನು ಜೀವನದಲ್ಲಿ ಅಳವಡಿಸಿದರೆ ವ್ಯಕ್ತಿಯ ಜೊತೆಗೆ ಸಮಾಜ, ಮತ್ತು ಇಡೀ ವಿಶ್ವವೇ ಸಾತ್ತ್ವಿಕ ಮತ್ತು ಸುಖೀಯಾಗುವುದು‌. ಹೀಗಾಗಿ ಅಖಂಡ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಧರ್ಮಾಚರಣೆ ಮಾಡಿ ಸಂಘಟಿತರಾಗೋಣ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದರು.
ಅವರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ 2 ದಿನಗಳ ಕಾಲ ಮಂಗಳೂರಿನ ವೆಂಕಟರಮಣ ದೇವಸ್ಥಾನದ ಸಭಾಗೃಹದಲ್ಲಿ  ನಡೆಯುವ ದಕ್ಷಿಣ ಜಿಲ್ಲಾ ಹಿಂದೂ ಅಧಿವೇಶನ ಶನಿವಾರ ಉದ್ಘಾಟಿಸಿ ಮಾತನಾಡಿದರು. ಮಾತೃಭೂಮಿ, ಜನ್ಮನೀಡಿದ ಮಾತೆಗೆ ಗೌರವ ನೀಡಲು ಕಲಿಸುವುದು, ಗೋಮಾತೆಯನ್ನು ಪೂಜನೀಯ ಸ್ಥಾನದಲ್ಲಿ ಕಾಣಲು ಕೇವಲ ಸನಾತನ ಹಿಂದೂ ಧರ್ಮದಲ್ಲಿ ಮಾತ್ರ ಸಾಧ್ಯ ಎಂದರು.
ಹಿಂದೂ ಜನಜಾಗೃತಿ ಸಮಿತಿ ರಾಜ್ಯ  ಸಮನ್ವಯಕ ಗುರುಪ್ರಸಾದ್ ಗೌಡ ಮಾತನಾಡಿ, ಹಿಂದೂ ಅಧಿವೇಶನದ ಉದ್ದೇಶವು ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುವುದಾಗಿದೆ. ಹಿಂದೂ ರಾಷ್ಟ್ರದ ಬೇಡಿಕೆಯು ಕಾನೂನು ಬಾಹಿರವಲ್ಲ. ಕಾನೂನು ಚೌಕಟ್ಟಿನಲ್ಲಿ ಸಂವಿಧಾನಾತ್ಮಕವಾಗಿ ಬೇಡಿಕೆಯನ್ನು ಮಾಡುವುದಾಗಿದೆ‌‌. ಜಗತ್ತಿನಲ್ಲಿ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ.ಹಿಂದೂ ರಾಷ್ಟ್ರ ದ ವಿಚಾರ ಭಾರತ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ‌. ಸೆಕ್ಯುಲರ್ ವ್ಯವಸ್ಥೆಯಿಂದಾಗಿ ಹಿಂದೂ ಧರ್ಮದ ಮೇಲೆ ಅನ್ಯಾಯವಾಗುತ್ತಿದೆ‌ ಎಂದರು.
ನ್ಯಾಯವಾದಿ ಕೃಷ್ಣಮೂರ್ತಿ ಮಾತನಾಡಿ ಇಂದು ಭಾರತವನ್ನು ವಿಭಜಿಸಲಾಗುತ್ತದೆ‌.ಮತಾಂತರ, ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆಯಿಂದ ಹಿಂದೂ ಧರ್ಮದ ಮೇಲೆ ಆಘಾತವಾಗುತ್ತಿದೆ‌‌.ಮಾತ್ರವಲ್ಲದೆ ನಾಗರಿಕ ತಿದ್ದುಪಡಿ ಕಾನೂನು ವಿರೋಧಿಸಿ ದೇಶದ ಆಸ್ತಿಪಾಸ್ತಿಗಳನ್ನು ಹಾನಿ ಮಾಡಲಾಗುತ್ತಿದೆ.ಅಖಂಡ ವಿಶ್ವಕ್ಕೆ ಶಾಂತಿಯನ್ನು ನೀಡಿದ ಧರ್ಮ ಅಂದರೆ ಸನಾತನ ಹಿಂದೂ ಧರ್ಮವಿದೆ.ಮುಂದಿನ ಪೀಳಿಗೆಯನ್ನು ಸಾತ್ತ್ವಿಕ ಮಾಡಬೇಕಾದರೆ ಮಕ್ಕಳಿಗೆ ಶಿಕ್ಷಣದಲ್ಲಿ ಭಗವದ್ಗೀತೆಯನ್ನು ಕಲಿಸಿ ದೇಶದ ಭವಿಷ್ಯವನ್ನು ಸುಧೃಢ ಮಾಡಬೇಕಾಗಿದೆ ಎಂದರು.
ಸನಾತನ ಸಂಸ್ಥೆಯ ಸಂತರಾದ ರಮಾನಂದ ಗೌಡ ಮಾತನಾಡಿ ಸ್ತುತ ದೇಶವು ಸಂಧಿಕಾಲದಲ್ಲಿ ಹಾದುಹೋಗುತ್ತಿದೆ. ಧರ್ಮ ಸಂಸ್ಥಾಪನೆಯ ಕಾಲವು ಸಮೀಪಿಸಿದೆ. ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ತನು,ಮನ, ಧನದ ತ್ಯಾಗದ ಜೊತೆಗೆ ಭಗವಂತನ ಆಶೀರ್ವಾದವು ಅಗತ್ಯವಿದೆ ಇದಕ್ಕಾಗಿ ಶ್ರಧ್ಧಾ ಭಕ್ತಿಯನ್ನು ಹೆಚ್ಚಿಸಬೇಕಾಗಿದೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

2 hours ago

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?

ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್‌ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…

4 hours ago

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!

ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…

11 hours ago

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!

ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…

14 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್

ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…

16 hours ago

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

1 day ago