Advertisement

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ

Share

ಉಜಿರೆ: ಭಾರತದ ಆದ್ಯಾತ್ಮಿಕತೆ, ಸಂಸ್ಕೃತಿ-ಸಂಸ್ಕಾರ ಹಾಗೂ ಕುಟುಂಬ ಜೀವನ ಪದ್ಧತಿ ವಿಶ್ವಕ್ಕೆ ಮಾದರಿಯಾಗಿದೆ. ಮನೆಯಲ್ಲಿ ಸ್ವರ್ಗ-ನರಕ ಎರಡೂ ಇದೆ. ಗಂಡ-ಹೆಂಡತಿ ಹಾಗೂ ಕುಟುಂಬದ ಸದಸ್ಯರೆಲ್ಲರೂ ಪರಸ್ಪರ ಪ್ರೀತಿ-ವಿಶ್ವಾಸದಿಂದ ಅನ್ಯೋನ್ಯತೆಯಿಂದ ಸೌಹಾರ್ದಯುತ ಜೀವನ ನಡೆಸಿದರೆ ಮನೆಯಲ್ಲೆ ಸ್ವರ್ಗ ಸುಖ ಅನುಭವಿಸಬಹುದು. ಆಗ ಮನೆಯೇ ಮಂತ್ರಾಲಯವಾಗುತ್ತದೆ. ಮನಸೇ ದೇವಾಲಯವಾಗುತ್ತದೆ. ಪರಸ್ಪರ ಅನ್ಯೋನ್ಯತೆ, ಹೊದಾಣಿಕೆ ಹಾಗೂ ಪ್ರೀತಿ-ವಿಶ್ವಾಸ ಇಲ್ಲವಾದಲ್ಲಿ ಮನೆಯೇ ನರಕ ಸದೃಶವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಅಣ್ಣಾ ಸಾಹೇಬ್ ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 

 

 

 

 

ಆಡು ಮುಟ್ಟದ ಸೊಪ್ಪಿಲ್ಲ, ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವಾ ಕ್ಷೇತ್ರವಿಲ್ಲ ಎಂದು ಹೇಳಿದ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನವಜೀವನ ಸಮಿತಿ ಆಶ್ರಯದಲ್ಲಿ ಹೆಗ್ಗಡೆಯವರು ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳು ಹಾಗೂ ವ್ಯಸನಮುಕ್ತ ಆರೋಗ್ಯ ಪೂರ್ಣ ಸಮಾಜ ರೂಪಿಸುವ ಕಾರ್ಯ ಸ್ತುತ್ಯಾರ್ಹವಾಗಿದೆ. ಕಿರು ಆರ್ಥಿಕ ಯೋಜನೆ ಮೂಲಕ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಮಹಿಳೆಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಶೇಕಡಾ ನೂರು ಸಾಲ ಮರು ಪಾವತಿಯಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾನಸಿಕ ಒತ್ತಡ, ವ್ಯವಹಾರದಲ್ಲಿ ಸೋಲು, ನಷ್ಟ, ಸಹವಾಸ ದೋಷ, ಆರೋಗ್ಯ ಸಮಸ್ಯೆ ಇತ್ಯಾದಿ ಹತ್ತು-ಹಲವು ಕಾರಣಗಳಿಂದ ಜನರು ಜಾತಿ-ಮತ, ಲಿಂಗ, ವಯಸ್ಸಿನ ಭೇದವಿಲ್ಲದೆ ಮದ್ಯಪಾನ ಚಟಕ್ಕೆ ಬಲಿಯಾಗುತ್ತಾರೆ. ಮಹಿಳೆಯರು ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಅವರು ಸಲಹೆ ನೀಡಿದರು. ಹೆಣ್ಣು ಮಕ್ಕಳಂತೆ ಗಂಡು ಮಕ್ಕಳಿಗೂ ಸಮಾನವಾಗಿ ಎಚ್ಚರಿಕೆ, ಮಾರ್ಗದರ್ಶನ ನೀಡಬೇಕು. ಎಲ್ಲಾ ಗ್ರಾಮಗಳು ವ್ಯಸನ ಮುಕ್ತ ಗ್ರಾಮಗಳಾದಾಗ ಮಾತ್ರ ಮಹಿಳೆಯರು ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು. ಅವರಿಗೆ ನಾವು ನ್ಯಾಯ ಒದಗಿಸಿದಂತಾಗುತ್ತದೆ ಎಂದು ಸಚಿವರು ಅಭಿಪ್ರಾಯ ಪಟ್ಟರು.

ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ, ಮಹಿಳೆಯರು ದುಶ್ಚಟಗಳ ದಮನ ಮಾಡುವ ಸಂಕಲ್ಪ ಶಕ್ತಿ ಮತ್ತುಆತ್ಮ ಬಲ ಹೊಂದಿರಬೇಕು. ಜನಜಾಗೃತಿ ವೇದಿಕೆಯ ನಿರಂತರ ಪರಿಶ್ರಮ-ಪ್ರಯತ್ನದಿಂದ ವ್ಯಸನ ಮುಕ್ತರಾಗಿ ಅನೇಕ ಕುಟುಂಬಗಳು ಇಂದು ಚೇತರಿಸಿ ನವಜೀವನ ನಡೆಸುತ್ತಿವೆ ಎಂದು ಹೇಳಿದರು. ಶಾಸಕ ಹರೀಶ್ ಪೂಂಜ ಮಾತನಾಡಿ, ಹೆಗ್ಗಡೆಯವರ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಕಂಡ ವ್ಯಸನಮುಕ್ತ ಭಾರತದ ಕನಸು ನನಸಾಗುತ್ತಿದೆ ಎಂದು ಹೇಳಿದರು.

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್‍ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವ್ಯಸನಮುಕ್ತರು ಕಾಯಾ, ವಾಚಾ, ಮನಸಾ, ಪರಿಶುದ್ಧರಾಗಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಪವಿತ್ರಾತ್ಮರಾಗಿದ್ದೀರಿ. ಮುಂದೆ ದೃಢ ಸಂಕಲ್ಪದಿಂದ ಅಂತರಂಗ-ಬಹಿರಂಗ ಪರಿಶುದ್ಧರಾಗಿ ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಕುಟುಂಬದ ಸದಸ್ಯರೆಲ್ಲರೂ ವ್ಯಸನ ಮುಕ್ತರನ್ನು ಪ್ರೀತಿ-ವಿಶ್ವಾಸ ಮತ್ತುಗೌರವದಿಂದ ನೋಡಿಕೊಳ್ಳಬೇಕು. ಮನೆ ಮಂದಿ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಬೇಕು ಎಂದು ಅವರು ಕಿವಿ ಮಾತು ಹೇಳಿದರು. ಶಾಲಾ-ಕಾಲೇಜುಗಳ ಬಳಿ ಡ್ರಗ್ಸ್ ಮಾರಾಟಜಾಲ ಹೆಚ್ಚಾಗುತ್ತಿದೆ. ಇದನ್ನು ಸರಕಾರ ತಡೆಗಟ್ಟಬೇಕು. ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದಂತೆ ತಡೆಯಲು ಶಾಲಾ-ಕಾಲೇಜುಗಳಲ್ಲಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದ ಮೂಲಕ ಅರಿವು, ಅರಿವು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಜನಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ವಿ. ಪಾೈಸ್ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ ಧನ್ಯವಾದವಿತ್ತರು.
ಭಾಸ್ಕರ್ ಎನ್. ಮತ್ತು ನಾಗೇಶ್‍ ಕಾರ್ಯಕ್ರಮ ನಿರ್ವಹಿಸಿದರು.
ಮುಖ್ಯಾಂಶಗಳು:
 ಸಚಿವೆ ಶಶಿಕಲಾ ಜೊಲ್ಲೆಅನ್ನಾಸಾಹೇಬ್‍ ಅವರನ್ನು ಹೆಗ್ಗಡೆಯವರು ಗೌರವಿಸಿದರು.
 ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ. ರೋಹಿಣಿ ಜನಜಾಗೃತಿ ವೇದಿಕೆಗೆ ಮದ್ಯವರ್ಜನ ಶಿಬಿರ ಆಯೋಜಿಸಲು 10 ಲಕ್ಷರೂ. ನೆರವು ನೀಡಿದರು.
 ಮದ್ಯವರ್ಜನ ಶಿಬಿರದಲ್ಲಿ ವ್ಯಸನ ಮುಕ್ತರಾಗಿ ನವಜೀವನ ನಡೆಸುತ್ತಿರುವ ಹುಣಸೂರಿನ ಕೃಷ್ಣೇಗೌಡ ಮತ್ತು ಮಂಡ್ಯದ ಸವಿತಾರುದ್ರಾಚಾರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
 ತಾನು 12 ವರ್ಷ ಪ್ರಾಯದವಳಿದ್ದಾಗ ತಾಯಿ-ತಂದೆಜೊತೆ ಧರ್ಮಸ್ಥಳಕ್ಕೆ ಬಂದಾಗ ಹೆಗ್ಗಡೆಯವರ ನಾಯಕತ್ವ ಹಾಗೂ ಸೇವಾ ಕಾರ್ಯದಿಂದ ಪ್ರೇರಿತಳಾಗಿದ್ದೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆಅನ್ನಾಸಾಹೇಬ್ ಹೇಳಿದರು.
 ಸಚಿವೆ ಅನೇಕ ಭಕ್ತಿಗೀತೆ, ರಾಗಿ ಬೀಸುವ ಹಾಡುಗಳನ್ನು ರಾಗದಿಂದ ಸರಾಗವಾಗಿ ಹಾಡಿ ಶ್ರೋತೃಗಳ ಮುಕ್ತ ಪ್ರಶಂಸೆಗೆ ಪಾತ್ರರಾದರು.
 ದುಶ್ಚಟಗಳು ಗೆದ್ದಲಿನಂತೆ ಇಡಿ ಮನೆ ಹಾಗೂ ಸಂಸಾರವನ್ನು ಹಾಳು ಮಾಡುತ್ತವೆ.
 ಮದ್ಯ ವ್ಯಸನಿಗಳ ಮನ ಪರಿವರ್ತನೆ ಮಾಡಿ ವ್ಯಸನ ಮುಕ್ತರನ್ನಾಗಿ ಮಾಡಿದವರಿಗೆ “ಜಾಗೃತಿ ಅಣ್ಣ” ಮತ್ತು “ಜಾಗೃತಿ ಮಿತ್ರ” ಪುರಸ್ಕಾರ ನೀಡಿ ಗೌರವಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago