ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್‌ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.
ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಹಲವು ವರುಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…