ಸುಳ್ಯ: ಸುಳ್ಯ ತಾಲೂಕು ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರ ಅವರು ಭಾನುವಾರ ರಾತ್ರಿ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಸುಳ್ಯದ ಬಿ ಜೆ ಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಎನ್.ಎ.ಸುಂದರ ಅವರ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಎಸ್ .ಅಂಗಾರ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್,ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಮುಖಂಡರಾದ ಎ.ವಿ .ತೀರ್ಥರಾಮ, ಮಹೇಶ್ ರೈ ಮೇನಾಲ, ಮೊದಲಾದವರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel