ಬೆಳ್ಳಾರೆ: ಇತ್ತೀಚೆಗಷ್ಟೆ ನಡೆದ ಅಷ್ಠಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ, ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಗಣಪತಿ ಹವನ, ಮೃತ್ಯುಂಜಯ ಹೋಮ ಹಾಗು ಏಕಾದಶ ರುದ್ರಾಭಿಷೇಕ ಸೇವೆಗಳು ನಡೆಯಿತು.
ಬೆಳಗ್ಗೆ 8.30ಕ್ಕೆ ಪ್ರಾರಂಭಗೊಂಡಿದ್ದ ಸೇವೆಗಳು ಅಪರಾಹ್ನ 12 ಗಂಟೆಗೆ ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆಗಳು ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುನಿಲ್‍ಕುಮಾರ್ ರೈ ಪುಡ್ಕಜೆ, ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗು ಊರ ಭಕ್ತರು ಉಪಸ್ಥಿತರಿದ್ದು, ಪೂಜಾ ಕಾರ್ಯಗಳಲ್ಲಿ ಭಾಗವಹಿಸಿದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…