ಅಡಿಕೆಯ ಬಗ್ಗೆ ಲೋಕಸಭೆಯಲ್ಲಿ ಮತ್ತೆ ವ್ಯತಿರಿಕ್ತ ಉತ್ತರ : ಅಡಿಕೆ ಬೆಳೆಗಾರರ ಪ್ರದೇಶದ ಸಂಸದರು ಮೌನ…!?

July 13, 2019
9:30 AM

ಮಂಗಳೂರು: ಅಡಿಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮತ್ತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ  ಉತ್ತರ ನೀಡಿದೆ. ಲೋಕಸಭೆಯಲ್ಲಿ ಸಂಸದ ದೇವುಸಿಂಗ್ ಜೆಸಿಂಗ್‌ಭಾಯ್ ಚೌಹಾಣ್ ಅವರ ಪ್ರಶ್ನೆಗೆ  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್  ವಿವರವಾದ ಉತ್ತರವನ್ನು ನೀಡುತ್ತಾ ಅಡಿಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಈ ಬಗ್ಗೆ ಅಡಿಕೆ ಬೆಳೆಗಾರರ ಪ್ರದೇಶದ ಸಂಸದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಮತ್ತೆ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗುವರೇ ಎಂಬ ಸಂದೇಹ ಕಾಡಿದೆ. 

Advertisement
Advertisement
Advertisement

ಲೋಕಸಭೆಯಲ್ಲಿ  ಪ್ರಶ್ನೆಗಳನ್ನು ಉಲ್ಲೇಖಿಸಿದ ಸಂಸದ ದೇವು ಸಿಂಗ್, ಅಡಿಕೆ ಸೇವನೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ವರದಿ ಇದೆ ಹಾಗಿದ್ದರೆ ಅದರ ವಿವರಗಳು , ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವಿಧಿಸಿರುವ ನಿಬಂಧನೆಗಳು ಗುಟ್ಕಾ, ಪ್ಯಾನ್ ಮಸಾಲಾ ಮತ್ತು ಇತರ  ವಸ್ತುಗಳ ಮೇಲೆ ಕೈಗೊಂಡಿರುವ ಕ್ರಮಗಳು ಸೇರಿದಂತೆ 4 ಉಪಪ್ರಶ್ನೆಗಳನ್ನು  ಕೇಳಿದ್ದಾರೆ.

Advertisement

ಇದಕ್ಕೆ ಉತ್ತರ ನೀಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್, ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ವರದಿಗಳು ಇವೆ. ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದೂ ಹೇಳಲಾಗಿದೆ.  ಕಾರ್ಸಿನೋಜೆನಿಕ್ ಆಗಿರುವುದರ ಬಗ್ಗೆಯೂ ವರದಿ ಇದೆ. ಹೀಗಾಗಿ ಬಾಯಿ, ಗಂಟಲು, ಅನ್ನನಾಳ, ಜಠರದ ಮೇಲೆ ಪರಿಣಾಮ ಇದೆ. ಅಡಿಕೆ ಉತ್ಪನ್ನಗಳು ಮತ್ತು ಜಗಿಯುವ ತಂಬಾಕಿಗೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವಿಧಿಸಿರುವ ನಿಬಂಧನೆಗಳ ಕುರಿತು ಸಚಿವರು ಉತ್ತರಿಸಿದರು. ಸುಪಾರಿ ಮತ್ತು ಪಾನ್ ಮಸಾಲವನ್ನು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಮಗಳು 2011 ರ ಅಡಿಯಲ್ಲಿ ಇರುತ್ತದೆ. ಯಾವುದೇ ಆಹಾರ ಉತ್ಪನ್ನದಲ್ಲಿ ತಂಬಾಕು ಮತ್ತು ನಿಕೋಟಿನ್  ಹಾಗೂ ಅಡಿಕೆಯನ್ನು  ಬಳಸುವುದನ್ನು ನಿಷೇಧಿಸಲಾಗಿದೆ ಎಂದು ವಿವರ ನೀಡಿದ್ದಾರೆ.

2017 ರಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರಾಗಿದ್ದ ಅನುಪ್ರಿಯಾ ಪಟೇಲ್  ಡಿಸೆಂಬರ್ 22, 2017 ರಂದು ಲೋಕಸಭೆಗೆ  ಇದೇ ಮಾಹಿತಿ ನೀಡಿದ್ದರು ಆಗಲೂ ತೀವ್ರ ಚರ್ಚೆಯಾಗಿತ್ತು. ಅನೇಕ ವರ್ಷಗಳಿಂದ ಅಡಿಕೆ ಬೆಳೆಗಾರರಿಗೆ ಇದೊಂದು ಸಂಕಷ್ಟ ಇದೆ. ಅಡಿಕೆ ಆಹಾರ ಪದಾರ್ಥಗಳಲ್ಲಿ  ಬಳಕೆ ಮಾಡಲಾಗುತ್ತದೆ. ಅಡಿಕೆ ಚಾಕೋಲೇಟ್, ಅಡಿಕೆ ಪೇಯ, ಐಸ್ ಕ್ರೀಂ ಇತ್ಯಾದಿಗಳಲ್ಲೂ ಬಳಕೆ ಮಾಡಬಹುದಾಗಿದೆ. ಅದೂ ಅಲ್ಲದೆ ಕಳೆದ ನೂರಾರು ವರ್ಷಗಳಿಂದ ಅಡಿಕೆ ಜಗಿಯುವ ಮಂದಿ ಇದ್ದಾರೆ. ಅಡಿಕೆಯನ್ನು ಪುರಾಣ ಕಾಲದಿಂದಲೂ ಪೂಕಾ ಕಾರ್ಯದಲ್ಲಿ ಬಳಕೆ ಮಾಡುತ್ತಾರೆ. ಹೀಗಿರುವಾಗ ಇದೊಂದು ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾದ್ಯವಾಗಿಲ್ಲ. ಜನಪ್ರತಿನಿಧಿಗಳು ಈ ಬಗ್ಗೆ ಆಸಕ್ತಿ ತೋರಿದಂತೆ ಕಾಣುತ್ತಿಲ್ಲ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror