ಮಂಗಳೂರು: ಅಡಿಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮತ್ತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಉತ್ತರ ನೀಡಿದೆ. ಲೋಕಸಭೆಯಲ್ಲಿ ಸಂಸದ ದೇವುಸಿಂಗ್ ಜೆಸಿಂಗ್‌ಭಾಯ್ ಚೌಹಾಣ್ ಅವರ ಪ್ರಶ್ನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್ ವಿವರವಾದ ಉತ್ತರವನ್ನು ನೀಡುತ್ತಾ ಅಡಿಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಈ ಬಗ್ಗೆ ಅಡಿಕೆ ಬೆಳೆಗಾರರ ಪ್ರದೇಶದ ಸಂಸದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಮತ್ತೆ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗುವರೇ ಎಂಬ ಸಂದೇಹ ಕಾಡಿದೆ.
ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಉಲ್ಲೇಖಿಸಿದ ಸಂಸದ ದೇವು ಸಿಂಗ್, ಅಡಿಕೆ ಸೇವನೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ವರದಿ ಇದೆ ಹಾಗಿದ್ದರೆ ಅದರ ವಿವರಗಳು , ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವಿಧಿಸಿರುವ ನಿಬಂಧನೆಗಳು ಗುಟ್ಕಾ, ಪ್ಯಾನ್ ಮಸಾಲಾ ಮತ್ತು ಇತರ ವಸ್ತುಗಳ ಮೇಲೆ ಕೈಗೊಂಡಿರುವ ಕ್ರಮಗಳು ಸೇರಿದಂತೆ 4 ಉಪಪ್ರಶ್ನೆಗಳನ್ನು ಕೇಳಿದ್ದಾರೆ.
ಇದಕ್ಕೆ ಉತ್ತರ ನೀಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್, ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ವರದಿಗಳು ಇವೆ. ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದೂ ಹೇಳಲಾಗಿದೆ. ಕಾರ್ಸಿನೋಜೆನಿಕ್ ಆಗಿರುವುದರ ಬಗ್ಗೆಯೂ ವರದಿ ಇದೆ. ಹೀಗಾಗಿ ಬಾಯಿ, ಗಂಟಲು, ಅನ್ನನಾಳ, ಜಠರದ ಮೇಲೆ ಪರಿಣಾಮ ಇದೆ. ಅಡಿಕೆ ಉತ್ಪನ್ನಗಳು ಮತ್ತು ಜಗಿಯುವ ತಂಬಾಕಿಗೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವಿಧಿಸಿರುವ ನಿಬಂಧನೆಗಳ ಕುರಿತು ಸಚಿವರು ಉತ್ತರಿಸಿದರು. ಸುಪಾರಿ ಮತ್ತು ಪಾನ್ ಮಸಾಲವನ್ನು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಮಗಳು 2011 ರ ಅಡಿಯಲ್ಲಿ ಇರುತ್ತದೆ. ಯಾವುದೇ ಆಹಾರ ಉತ್ಪನ್ನದಲ್ಲಿ ತಂಬಾಕು ಮತ್ತು ನಿಕೋಟಿನ್ ಹಾಗೂ ಅಡಿಕೆಯನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ವಿವರ ನೀಡಿದ್ದಾರೆ.
2017 ರಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರಾಗಿದ್ದ ಅನುಪ್ರಿಯಾ ಪಟೇಲ್ ಡಿಸೆಂಬರ್ 22, 2017 ರಂದು ಲೋಕಸಭೆಗೆ ಇದೇ ಮಾಹಿತಿ ನೀಡಿದ್ದರು ಆಗಲೂ ತೀವ್ರ ಚರ್ಚೆಯಾಗಿತ್ತು. ಅನೇಕ ವರ್ಷಗಳಿಂದ ಅಡಿಕೆ ಬೆಳೆಗಾರರಿಗೆ ಇದೊಂದು ಸಂಕಷ್ಟ ಇದೆ. ಅಡಿಕೆ ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡಲಾಗುತ್ತದೆ. ಅಡಿಕೆ ಚಾಕೋಲೇಟ್, ಅಡಿಕೆ ಪೇಯ, ಐಸ್ ಕ್ರೀಂ ಇತ್ಯಾದಿಗಳಲ್ಲೂ ಬಳಕೆ ಮಾಡಬಹುದಾಗಿದೆ. ಅದೂ ಅಲ್ಲದೆ ಕಳೆದ ನೂರಾರು ವರ್ಷಗಳಿಂದ ಅಡಿಕೆ ಜಗಿಯುವ ಮಂದಿ ಇದ್ದಾರೆ. ಅಡಿಕೆಯನ್ನು ಪುರಾಣ ಕಾಲದಿಂದಲೂ ಪೂಕಾ ಕಾರ್ಯದಲ್ಲಿ ಬಳಕೆ ಮಾಡುತ್ತಾರೆ. ಹೀಗಿರುವಾಗ ಇದೊಂದು ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾದ್ಯವಾಗಿಲ್ಲ. ಜನಪ್ರತಿನಿಧಿಗಳು ಈ ಬಗ್ಗೆ ಆಸಕ್ತಿ ತೋರಿದಂತೆ ಕಾಣುತ್ತಿಲ್ಲ.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…