ಅಡಿಕೆ ಖರೀದಿಗೆ ಕ್ಯಾಂಪ್ಕೋ ಸಿದ್ಧತೆ | ಶಾಸಕರು-ಅಧಿಕಾರಿಗಳ ಜೊತೆ ಸಭೆ | ಸದ್ಯದಲ್ಲೇ ಅಡಿಕೆ ಖರೀದಿ ವ್ಯವಸ್ಥೆ |

April 9, 2020
5:27 PM

ಪುತ್ತೂರು: ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಸಿದ್ಧತೆ ನಡೆಸುತ್ತಿದೆ. ಲಾಕ್ಡೌನ್ ಸಂದರ್ಭ  ಅಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ಅಂಗಡಿಗಳು ಬಂದ್ ಆಗಿತ್ತು. ಇದೀಗ ಅಡಿಕೆ ಬೆಳೆಗಾರರಿಗೆ ಹಿತರಕ್ಷಣೆಗೆ ಮುಂದಾಗಿರುವ ಕ್ಯಾಂಪ್ಕೋ ಈಗ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆಸಿದೆ.

ಈ ಹಿನ್ನೆಲೆಯಲ್ಲಿ  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ನಿರ್ದೇಶಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ, ಸಾಜ ರಾಧಾಕೃಷ್ಣ ಆಳ್ವ  ಅವರು ಸಭೆ ನಡೆಸಿದರು.

ಸದ್ಯ ಆಯ್ದ ಅಡಿಕೆ ಖರೀದಿ ಕೇಂದ್ರಗಳಲ್ಲಿ  ಮಾತ್ರಾ ಅಡಿಕೆ ಖರೀದಿ ನಡೆಸುವುದು  ಈ ಬಗ್ಗೆ ಅಧಿಕಾರಿಗಳು ಖರೀದಿ ಕೇಂದ್ರಗಳ ತಪಾಸಣೆ ನಡೆಸುವರು. ಸೋಮವಾರದ ನಂತರ ಅಡಿಕೆ ಖರೀದಿ ನಡೆಯಲಿದೆ. ಅಡಿಕೆ ಬೆಳೆಗಾರರಿಗೆ ತಿಂಗಳಿಗೆ 25000 ರೂಪಾಯಿ ಮೌಲ್ಯದ ಅಡಿಕೆ ಖರೀದಿ ಅಥವಾ 1 ಕ್ವಿಂಟಾಲ್ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಯಾವ್ಯಾವ ಕೇಂದ್ರದಲ್ಲಿ  ಅಡಿಕೆ ಖರೀದಿ ನಡೆಯುತ್ತದೆ ಹಾಗೂ ಅಡಿಕೆ ತರುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗುವುದು  ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror