ಪುತ್ತೂರು: ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಸಿದ್ಧತೆ ನಡೆಸುತ್ತಿದೆ. ಲಾಕ್ಡೌನ್ ಸಂದರ್ಭ ಅಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ಅಂಗಡಿಗಳು ಬಂದ್ ಆಗಿತ್ತು. ಇದೀಗ ಅಡಿಕೆ ಬೆಳೆಗಾರರಿಗೆ ಹಿತರಕ್ಷಣೆಗೆ ಮುಂದಾಗಿರುವ ಕ್ಯಾಂಪ್ಕೋ ಈಗ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ನಿರ್ದೇಶಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ, ಸಾಜ ರಾಧಾಕೃಷ್ಣ ಆಳ್ವ ಅವರು ಸಭೆ ನಡೆಸಿದರು.
ಸದ್ಯ ಆಯ್ದ ಅಡಿಕೆ ಖರೀದಿ ಕೇಂದ್ರಗಳಲ್ಲಿ ಮಾತ್ರಾ ಅಡಿಕೆ ಖರೀದಿ ನಡೆಸುವುದು ಈ ಬಗ್ಗೆ ಅಧಿಕಾರಿಗಳು ಖರೀದಿ ಕೇಂದ್ರಗಳ ತಪಾಸಣೆ ನಡೆಸುವರು. ಸೋಮವಾರದ ನಂತರ ಅಡಿಕೆ ಖರೀದಿ ನಡೆಯಲಿದೆ. ಅಡಿಕೆ ಬೆಳೆಗಾರರಿಗೆ ತಿಂಗಳಿಗೆ 25000 ರೂಪಾಯಿ ಮೌಲ್ಯದ ಅಡಿಕೆ ಖರೀದಿ ಅಥವಾ 1 ಕ್ವಿಂಟಾಲ್ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಯಾವ್ಯಾವ ಕೇಂದ್ರದಲ್ಲಿ ಅಡಿಕೆ ಖರೀದಿ ನಡೆಯುತ್ತದೆ ಹಾಗೂ ಅಡಿಕೆ ತರುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…