ಅಡಿಕೆ ಖರೀದಿ ಆರಂಭ : ಅಡಿಕೆ ಬೆಳೆಗಾರರ ಸಂಘದಿಂದ ಕ್ಯಾಂಪ್ಕೋಗೆ ಕೃತಜ್ಞತೆ

April 14, 2020
6:05 PM

ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು. ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ ಮುಂದಾಗಿದೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ನೈತಿಕ ಧೈರ್ಯ ತುಂಬಿದೆ. ಇದಕ್ಕಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಕ್ಯಾಂಪ್ಕೋಗೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ  ತಿಳಿಸಿದ್ದಾರೆ.

Advertisement

ಲಾಕ್ಡೌನ್ ಸಂದರ್ಭ ಎಲ್ಲಿಯೂ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿಲ್ಲ. ದಕ್ಷಿಣ ಕನ್ನಡ , ಕಾಸರಗೋಡು, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಡಿಕೆಯೇ ಪ್ರಮುಖ ಬೆಳೆಯಾಗಿದೆ. ಅಡಿಕೆ ಬೆಳೆಗಾರರು ಅಡಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಇವರಿಗೆ ಅಡಿಕೆ ಮಾರಾಟ ಮಾಡದೇ ಯಾವುದೇ ವ್ಯವಹಾರ ಮಾಡಲು ಕಷ್ಟದ ಸನ್ನಿವೇಶ ಇತ್ತು. ಇದರ ಜೊತೆಗೆ ಉತ್ತರ ಭಾರತದಲ್ಲೂ ಅಡಿಕೆ ಮಾರಾಟ ಆಗದ ಸ್ಥಿತಿ ಕಂಡುಬಂದಿತ್ತು. ಬೇಡಿಕೆ ಇದ್ದರೂ ಪೂರೈಕೆ ಕಷ್ಟದ ಸ್ಥಿತಿ ಇದೆ.

ಮುಂದಿನ ದಿನಗಳಲ್ಲಿ ಇತರ ಎಲ್ಲಾ ಕೃಷಿ ಉತ್ಪನ್ನ ಖರೀದಿಗೆ ಅನುಕೂಲ ವಾತಾವರಣವನ್ನು ಆಡಳಿತ ಹಾಗೂ ಸಹಕಾರ ಸಂಘಗಳಿಂದ ಸೃಷ್ಟಿಯಾಗುವಂತಾಗಬೇಕು ಹಾಗೂ ಗ್ರಾಮೀಣ ಭಾಗದಲ್ಲೂ ಅಡಿಕೆ ಖರೀದಿ ಕೇಂದ್ರದ ಕ್ಯಾಂಪ್ಕೋ ಶಾಖೆಗಳಲ್ಲಿ ಕನಿಷ್ಟ ಒಂದು ದಿನದ ವ್ಯವಸ್ಥೆಯಾಗಬೇಕು ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಒತ್ತಾಯಿಸಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |
August 9, 2025
2:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group