ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು. ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ ಮುಂದಾಗಿದೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ನೈತಿಕ ಧೈರ್ಯ ತುಂಬಿದೆ. ಇದಕ್ಕಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಕ್ಯಾಂಪ್ಕೋಗೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ತಿಳಿಸಿದ್ದಾರೆ.
ಲಾಕ್ಡೌನ್ ಸಂದರ್ಭ ಎಲ್ಲಿಯೂ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿಲ್ಲ. ದಕ್ಷಿಣ ಕನ್ನಡ , ಕಾಸರಗೋಡು, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಡಿಕೆಯೇ ಪ್ರಮುಖ ಬೆಳೆಯಾಗಿದೆ. ಅಡಿಕೆ ಬೆಳೆಗಾರರು ಅಡಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಇವರಿಗೆ ಅಡಿಕೆ ಮಾರಾಟ ಮಾಡದೇ ಯಾವುದೇ ವ್ಯವಹಾರ ಮಾಡಲು ಕಷ್ಟದ ಸನ್ನಿವೇಶ ಇತ್ತು. ಇದರ ಜೊತೆಗೆ ಉತ್ತರ ಭಾರತದಲ್ಲೂ ಅಡಿಕೆ ಮಾರಾಟ ಆಗದ ಸ್ಥಿತಿ ಕಂಡುಬಂದಿತ್ತು. ಬೇಡಿಕೆ ಇದ್ದರೂ ಪೂರೈಕೆ ಕಷ್ಟದ ಸ್ಥಿತಿ ಇದೆ.
ಮುಂದಿನ ದಿನಗಳಲ್ಲಿ ಇತರ ಎಲ್ಲಾ ಕೃಷಿ ಉತ್ಪನ್ನ ಖರೀದಿಗೆ ಅನುಕೂಲ ವಾತಾವರಣವನ್ನು ಆಡಳಿತ ಹಾಗೂ ಸಹಕಾರ ಸಂಘಗಳಿಂದ ಸೃಷ್ಟಿಯಾಗುವಂತಾಗಬೇಕು ಹಾಗೂ ಗ್ರಾಮೀಣ ಭಾಗದಲ್ಲೂ ಅಡಿಕೆ ಖರೀದಿ ಕೇಂದ್ರದ ಕ್ಯಾಂಪ್ಕೋ ಶಾಖೆಗಳಲ್ಲಿ ಕನಿಷ್ಟ ಒಂದು ದಿನದ ವ್ಯವಸ್ಥೆಯಾಗಬೇಕು ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಒತ್ತಾಯಿಸಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…