“ಅಡಿಕೆ ಹಾನಿಕಾರಕ”ವಲ್ಲ ಎಂದು ಮನವರಿಕೆ ಮಾಡಿದ ಅಡಿಕೆ ಬೆಳೆಗಾರ ಪ್ರದೇಶದ ಸಂಸದರು

July 18, 2019
8:00 AM

ಮಂಗಳೂರು: ಅಡಿಕೆ ಹಾನಿಕಾರಕವಲ್ಲ, ಅಡಿಕೆ ಮಾನವ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಬಗ್ಗೆ ಅಡಿಕೆ ಬೆಳೆಗಾರರ ಪ್ರದೇಶದ ಸಂಸದರುಗಳು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್  ಅವರಿಗೆ ಮನವರಿಕೆ ಮಾಡಿದ್ದಾರೆ.

Advertisement
Advertisement
Advertisement

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು  ಆರೋಗ್ಯ ಸಚಿವರನ್ನು  ಭೇಟಿ ಮಾಡಿದರು. ಜುಲೈ 12, 2019 ರಂದು ಅಡಿಕೆ ಬಳಕೆಯ ಕುರಿತು ಚುಕ್ಕೆ ರಹಿತ ಪ್ರಶ್ನೆಗೆ ಸರಕಾರವು ಅಡಿಕೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ನಲ್ಲಿರುವ ಅಫಿಡವಿಟ್ ನ್ನು ಉಲ್ಲೇಖ ಮಾಡಿ ನೀಡಿದ ಉತ್ತರದ ಬಗ್ಗೆ  ಸಚಿವರನ್ನು ಭೇಟಿ ಮಾಡಿ ಅಡಿಕೆಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂಬುದರ ಬಗ್ಗೆ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಯು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಲಾಗಿದೆ ಎಂಬುವುದು ಸಚಿವರಿಗೆ ಸಂಸದರು ತಿಳಿಸಿದರು.

Advertisement

ಈ ಬಗ್ಗೆ ಸ್ಪಂದಿಸಿದ ಸಚಿವರು ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯು.ಪಿ.ಎ ಸರಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವುದರಿಂದ ಈ ಅಫಿಡವಿಟ್ ನ್ನು ಹಿಂದಕ್ಕೆ ಪಡೆದುಕೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದರು ಮತ್ತು ಸುಪ್ರೀಂ ಕೋರ್ಟ್ ನಿಂದ ಅಫಿಡವಿಟ್ ನ್ನು ಹಿಂದಕ್ಕೆ ಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಂಸದರ ನಿಯೋಗದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ, ದಾವಣಗೆರೆ ಸಂಸದ ಹಾಗೂ ಮಾಜಿ ಸಚಿವ ಶ್ರೀ.ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮುಂತಾದವರಿದ್ದರು.

Advertisement

 


ಕಳೆದ ಬಾರಿಯೂ ಇದೇ ಮಾದರಿಯಲ್ಲಿ ಮನವಿ ಸಲ್ಲಿಸಲಾಗಿತ್ತು. ಆರೋಗ್ಯ ಸಚಿವರನ್ನು  ಎರಡು ಬಾರಿ ಭೇಟಿ ಮಾಡಿ ಮನವಿ ನೀಡಲಾಗಿತ್ತು. ಅದಾದ ನಂತರ ಯಾವುದೇ ಬೆಳವಣಿಗೆ ಆಗದೇ ಇರುವ ಕಾರಣದಿಂದ ಈ ಬಾರಿಯೂ ಅದೇ ಉತ್ತರವನ್ನು ಆರೋಗ್ಯ ಸಚಿವಾಲಯ ನೀಡಿದೆ. ಇಲ್ಲಿ ಈಗ ಆರೋಗ್ಯ ಸಚಿವರು ನೀಡಿದ ಹೇಳಿಕೆ ಕೂಡಾ ರಾಜಕೀಯದ ಹಿನ್ನೆಲೆಯಲ್ಲಿ ಕಾಣುತ್ತಿದೆ. ಏಕೆಂದರೆ ಯು ಪಿ ಎ ಸರಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್ ಗೆ ಅಫಿಡವಿತ್ ಸಲ್ಲಿಸಿರುವುದಾಗಿದ್ದರೆ ಆ ನಂತರ ಏಕೆ ಇದುವರೆಗೂ ಯಾವುದೇ ಪಕ್ಷಗಳು ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಒಂದು ಕಡೆಯಾದರೆ, ಎರಡೂ ಪಕ್ಷಗಳು ಅಡಿಕೆ ಬೆಳೆಗಾರ ಹಿತಕ್ಕಾಗಿ ಕೆಲಸ ಮಾಡುವುದಿಲ್ಲ, ಕೇವಲ ಅಡಿಕೆ ಹೆಸರಿನಲ್ಲಿ ಪಾದಯಾತ್ರೆ ಮಾಡಿ ಬೆಳೆಗಾರರನ್ನು  ಸೆಳೆಯುವ ತಂತ್ರವೇ ಎಂದು ಕೃಷಿ ಸಂಘಟನೆಗಳು ಈಗ ಚರ್ಚೆ ಮಾಡುತ್ತಿವೆ.

Advertisement

ಏನೇ ಆಗಲಿ ರಾಜಕೀಯ ರಹಿತವಾಗಿ ಇಲ್ಲಿ ಕೆಲಸವಾಗಬೇಕು. ಅಡಿಕೆ ಬೆಳೆಗಾರರ ಹಿತ ಕಾಯುವ ಕೆಲಸವಾಗಬೇಕು.

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

30ಕ್ಕೆ ಮುನ್ನ ಅಮ್ಮನಾಗಿ!? : ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ.
April 15, 2024
11:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ ಹೆಚ್ಚಿದ ವಿದ್ಯುತ್ ಬೇಡಿಕೆ : ಅನಿಲ ಆಧಾರಿತ ಸ್ಥಾವರಗಳ ಕಾರ್ಯಾರಂಭಕ್ಕೆ ಕೇಂದ್ರ ಸರ್ಕಾರ ಸೂಚನೆ
April 15, 2024
11:02 PM
by: The Rural Mirror ಸುದ್ದಿಜಾಲ
ದೇಶದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ | ಹವಾಮಾನ ಇಲಾಖೆ
April 15, 2024
10:16 PM
by: The Rural Mirror ಸುದ್ದಿಜಾಲ
2047 ಭಾರತಕ್ಕೆ ಸ್ವಾತಂತ್ರ್ಯ ದೊರಕಿ 100 ವರ್ಷ | ಮುಂದಿನ 25 ವರ್ಷಕ್ಕೆ ಈಗಲೇ ತಯಾರಿಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ
April 15, 2024
10:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror