ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

December 2, 2019
10:05 PM

ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯಿತು. ನೂರಾರು ಮಂದಿ ಭಕ್ತರು ಆಗಮಿಸಿದ್ದರು.

ನೂತನ ಪಾಕಶಾಲೆ ಪ್ರವೇಶೋತ್ಸವ: ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಾಕಶಾಲೆಯ ಪ್ರವೇಶೋತ್ಸವ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಗಣಪತಿ ಹವನ ನಡೆಯುವುದರ ಮೂಲಕ ನೂತನ ಪಾಕಶಾಲೆಯ ಪ್ರವೇಶೋತ್ಸವ ನಡೆಯಿತು. ನಂತರ ಉಷ:ಪೂಜೆ, ನವಕಪೂಜೆ ನಡೆಯಿತು. ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಂತರ ಅಪರಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಭಟ್, ಆಡಳಿತಾಧಿಕಾರಿ ಹೂವಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಜಿರ್ಣೋದ್ಧಾರ ಸಮಿತಿ ಸದಸ್ಯರು, ಬೈಲುವಾರು ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror