ಸುಳ್ಯ: ಕೆಲವು ದಿನಗಳ ಹಿಂದೆ ಸರಣಿ ಅಪಘಾತದಿಂದಾಗಿ ಏಳು ಜೀವಗಳು ಬಲಿಯಾಗಿದ್ದ ರಾಷ್ಟ್ರೀಯ ಹೆದ್ದಾರಿ 275ರ ಸುಳ್ಯ ಸಮೀಪದ ಆಡ್ಕಾರ್ ಮಾವಿನಕಟ್ಟೆಯಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತ ನಡೆದಿದೆ. ಕಾರು ಮತ್ತು ಲಾರಿ ನಡುವಿನ ಅಪಘಾತ ಉಂಟಾಗಿ ಕಾರು ನುಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಅಡ್ಕಾರ್ ನಲ್ಲಿ ಕಳೆದ 15 ದಿನದಲ್ಲಿ ಉಂಟಾದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಬಳಿಕ ಅಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರೂ ಮತ್ತೆ ಅಪಘಾತ ಉಂಟಾಗಿದೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…