ಸುಳ್ಯ: ಬಿಜಿಪಿ ಮಂಡಲ ಸಮಿತಿ ಪತ್ರಿಕಾ ಪ್ರಕಟಣೆಯೊಂದನ್ನು ನೀಡಿದ್ದು ಇದರಲ್ಲಿ ಒಟ್ಟು 5 ಮಂದಿಯನ್ನು ಪಕ್ಷ ಹಾಗೂ ಸಂಘಟನೆಯ ಎಲ್ಲಾ ರೀತಿಯ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯದರ್ಶಿ ಸುಬೋದ್ ಮೇನಾಲ ಹಾಗೂ ಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೀಗಿದೆ,
ಪಕ್ಷ ಹಾಗೂ ಸಂಘಟನೆಯ ಅಪೇಕ್ಷೆಯಂತೆ, ಸುಳ್ಯ ಮಂಡಲದ ವ್ಯಾಪ್ತಿಗೊಳಪಟ್ಟ ಪ್ರಾ.ಕೃ.ಪ.ಸ.ಸಂಘ ಅರಂತೋಡು ಇದರ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಎಂ.ಬಾಲಗೋಪಾಲ ಸೇರ್ಕಜೆ, ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶಿವಪ್ರಸಾದ್ ಯು.ಎಂ., ಉಬರಡ್ಕ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಮರ್ಕಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರುಕ್ಮಯ್ಯ ಗೌಡ, ನೆಲ್ಲೂರುಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ವೆಂಕಟ್ ದಂಬೆಕೋಡಿ, ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸದಾಶಿವ ಮೂಕಮಲೆ, ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಕಳಂಜ-ಬಾಳಿಲ
ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಅಜಿತ್ ರಾವ್ ಕಿಲಂಗೋಡಿ, ಮುರುಳ್ಯ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಪ್ರಸನ್ನ ಎಣ್ಮೂರು, ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಸಂತೋಷ್ ಜಾಕೆ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಸತೀಶ್ ಕೆಮನಬಳ್ಳಿ ಮತ್ತು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿಯವರು ತಮ್ಮ ಸಹಕಾರಿ ಜವಾಬ್ದಾರಿಗೆ ರಾಜೀನಾಮೆ ನೀಡಿರುವುದಾಗಿ ಪಕ್ಷದ ಪ್ರಮುಖರಿಗೆ ಹಾಗೂ ಕಚೇರಿಗೆ ಮಾಹಿತಿ ನೀಡಿರುತ್ತಾರೆ.
ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಕೃಪಾಶಂಕರ ತುದಿಯಡ್ಕ ಹಾಗೂ ಬಿಳಿನೆಲೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಬಾಲಕೃ ಷ್ಣ ಗೌಡ ವಾಲ್ತಾಜೆ ಇವರು ಯಾವುದೇ ರೀತಿಯಲ್ಲಿ ಸ್ಪಂದಿಸದ ಕಾರಣ, ಇವರನ್ನು ಪಕ್ಷ-ಸಂಘಟನೆಯ ಎಲ್ಲಾ ರೀತಿಯ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಈ ಮೂಲಕ ತಿಳಿಯಪಡಿಸಲಾಗಿದೆ.
ಇದಲ್ಲದೆ ಪಕ್ಷದ ಹಾಗೂ ಸಂಘಟನೆಯ ಅಪೇಕ್ಷೆಯನ್ನು ಮತ್ತು ತೀರ್ಮಾನವನ್ನು ಉಲ್ಲಂಘಿಸಿ ನಡೆದುಕೊಂಡ ಸುಳ್ಯ ಸಿ.ಎ. ಬ್ಯಾಂಕ್ ಮಾಜಿ ನಿರ್ದೇಶಕ ಕರುಣಾಕರ ಎ.ಎಸ್. ಅಡ್ಪಂಗಾಯ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ ಗೀತಾ ಗೋಪಿನಾಥ ಬೊಳುಬೈಲು ಹಾಗೂ ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಕೆ. ಕೂಸಪ್ಪ ನಾಯ್ಕ ಕೊಡಿಯಾಲ ಇವರನ್ನು ಕೂಡಾ ಸಂಘಟನೆಯ ವಿವಿಧ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ.
ಎಂದು ಪ್ರಕಟಣೆ ತಿಳಿಸಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…