Advertisement
Political mirror

ಅಡ್ಡ ಮತದಾನ ಪರಿಣಾಮ : ರಾಜೀನಾಮೆ ಪರ್ವ ಆರಂಭ

Share

ಸುಳ್ಯ: ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್‍ನ ಚುನಾವಣೆಯಲ್ಲಿ ಸುಳ್ಯ ತಾಲೂಕಿನ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಪ್ರತಿನಿಧಿಗಳಾಗಿ ಮತದಾನ ಮಾಡಿದ್ದ 17 ಮಂದಿಯೂ ರಾಜೀನಾಮೆ ನೀಡಲು ಬಿಜೆಪಿ, ಸಹಕಾರ ಭಾರತಿ ಹಾಗೂ ಸಂಘಪರಿವಾರ ಸೂಚನೆ ನೀಡಿದ ಬೆನ್ನಲ್ಲೇ ರಾಜೀನಾಮೆ ಪರ್ವ ಆರಂಭವಾಗಿದೆ.

ಎಸ್‍ಸಿಡಿಸಿಸಿ ಬ್ಯಾಂಕ್‍ನ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧಿಕೃತ ಅಭ್ಯರ್ಥಿಗೆ ಸೋಲಾದ ಬಳಿಕ ಶಿಸ್ತು ಕ್ರಮಕ್ಕೆ ಮುಂದಾದ ಸಹಕಾರ ಭಾರತಿ ಹಾಗೂ ಬಿಜೆಪಿ ಮತ್ತು ಸಂಘಪರಿವಾರ 17 ಮಂದಿಯೂ ರಾಜೀನಾಮೆ ನೀಡಲು ಸೂಚನೆ ನೀಡಿದೆ. ಹೀಗಾಗಿ ಈಗ ರಾಜೀನಾಮೆ ಪರ್ವ ಆರಂಭವಾಗಿದೆ.

ಈ ಸೂಚನೆಗೂ ಮುನ್ನವೇ ಅಭ್ಯರ್ಥಿಯಾಗಿದ್ದ ವೆಂಕಟ್ ದಂಬೆಕೋಡಿ ಅವರು  ನೈತಿಕ ಹೊಣೆ ಹೊತ್ತು  ತಾನು ನಿರ್ದೇಶಕನಾಗಿರುವ  ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ್ದರು. ಈ ಮೂಲಕ ಮಾದರಿಯಾಗಿದ್ದರು.   ಇದೀಗ ಸಂಘಪರಿವಾರದಿಂದ ಸೂಚನೆ ಬಂದ ಬಳಿಕ  ಮುರುಳ್ಯ- ಎಣ್ಮೂರು ಸಹಕಾರಿ ಬ್ಯಾಂಕ್ ನಿರ್ದೇಶಕ ಪ್ರಸನ್ನ ಎಣ್ಮೂರು ಅವರು ಸಹಕಾರಿ ಸಂಘದ ಕಾರ್ಯದರ್ಶಿ ಅವರಿಗೆ ರಾಜಿನಾಮೆ ಪತ್ರ ನೀಡಿದ್ದಾರೆ. ಇದರ ಜೊತಗೆ ಸಹಕಾರಿ ಭಾರತಿಯ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುವುದಾಗಿ ಜಿಲ್ಲಾ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ.

ಸಹಕಾರ ಭಾರತಿ ತಾಲೂಕು ಅಧ್ಯಕ್ಷ , ನೆಲ್ಲೂರು ಕೆಮ್ರಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ವಿಷ್ಣು ಭಟ್ ಅವರು ಸಹಕಾರಿ ಸಂಘದ ನಿರ್ದೇಶಕರ ಸಭೆ ಕರೆದು ರಾಜೀನಾಮೆ ನೀಡುವುದಾಗಿ “ಸುಳ್ಯನ್ಯೂಸ್.ಕಾಂ” ತಿಳಿಸಿದ್ದಾರೆ.

ಈ ಹೆಸರು ಹೇಳಲಿಚ್ಚಿಸದ ಮುಖಂಡರೊಬ್ಬರು, ಸಂಘಪರಿವಾರದ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಧರ್ಮದ ಮೇಲೆ ನಂಬಿಕೆ ಇರುವ ಪಕ್ಷವು ಹಾಗಾದರೆ ಕಾನತ್ತೂರಿಗೆ ಬರಲು ಹೇಳಿ ಸತ್ಯದ ನುಡಿಯನ್ನು ಹೇಳಿಸಿದ್ದೇಕೆ ?, ಎಲ್ಲರನ್ನೂ ಸಂಶಯದಿಂದ ನೋಡುವುದೇಕೆ ? ಹಾಗಿದ್ದರೆ ದೈವ-ದೇವರ ಮೇಲೆಯೇ ನಂಬಿಕೆ ಇಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

4 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

20 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago