ಹೈದರಾಬಾದ್: ಹೈದರಾಬಾದ್ ಎನ್‌ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.
ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…