ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್‍ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ.
ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ. ಅಂತಿಮ ಅಂತದ ತಂತ್ರಗಾರಿಕೆ ಬಗ್ಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದಾರೆ. ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…