ಅಧಿಕಾರಿಗಳಿಂದ ಹಲ್ಲೆ ಆರೋಪ: ಸುಬ್ರಹ್ಮಣ್ಯ ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ

October 1, 2019
11:20 AM

ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡ,ಮಾನವಹಕ್ಕು ಹೋರಾಟ ಸಮಿತಿ, ಒಕ್ಕಲಿಗ ಗೌಡ ಸಮುದಾಯ ನೇತೃತ್ವದಲ್ಲಿ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.

Advertisement
Advertisement
Advertisement

ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು. ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯಧಿಕಾರಿಗಳು ಬಂಧಿಸಿ, ಅವರಿಗೆ 25 ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಈ ಹಿಂದೆ ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆದು ಮನವಿ ಸಲ್ಲಿಸಲಾಗಿತ್ತು. ಆದರೂ ಅರಣ್ಯಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಮತ್ತೆ ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯಿತು.

Advertisement

ಪ್ರತಿಭಟನೆಯಲ್ಲಿ ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಬಿಳಿ ಕಾಗದಗಳಿಗೆ ಸಹಿ ಮಾಡಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Advertisement

ಲೋಕೇಶ್ ಅವರಿಗೆ ಹಲ್ಲೆ ನಡೆಸಿದ ಅರಣ್ಯ ರಕ್ಷಕ  ಹಾಗೂ ಅವರಿಗೆ ಸಹಕರಿಸಿದ ಇತರ ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಮನವಿ ಮಾಡಲಾಗಿದೆ.ಇಲ್ಲದೇ ಹೋದಲ್ಲಿ ಮುಖ್ಯಮಂತ್ರಿ ನಿವಾಸ,ಗೃಹಸಚಿವರ ನಾಸ ಮುಂದೆ ಪ್ರತಿಭಟನೆ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.

ಪೋಲಿಸ್ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ತಂಡದ ಸದಸ್ಯರು,ಮಾನವಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು,ಗೌಡ ಸಮುದಾಯದ ಸದಸ್ಯರು, ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಪೋಲಿಸರು ಭದ್ರತೆಯನ್ನು ಒದಗಿಸಿದರು.

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror