ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡ,ಮಾನವಹಕ್ಕು ಹೋರಾಟ ಸಮಿತಿ, ಒಕ್ಕಲಿಗ ಗೌಡ ಸಮುದಾಯ ನೇತೃತ್ವದಲ್ಲಿ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.
ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು. ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯಧಿಕಾರಿಗಳು ಬಂಧಿಸಿ, ಅವರಿಗೆ 25 ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಈ ಹಿಂದೆ ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆದು ಮನವಿ ಸಲ್ಲಿಸಲಾಗಿತ್ತು. ಆದರೂ ಅರಣ್ಯಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಮತ್ತೆ ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಬಿಳಿ ಕಾಗದಗಳಿಗೆ ಸಹಿ ಮಾಡಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ಲೋಕೇಶ್ ಅವರಿಗೆ ಹಲ್ಲೆ ನಡೆಸಿದ ಅರಣ್ಯ ರಕ್ಷಕ ಹಾಗೂ ಅವರಿಗೆ ಸಹಕರಿಸಿದ ಇತರ ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಮನವಿ ಮಾಡಲಾಗಿದೆ.ಇಲ್ಲದೇ ಹೋದಲ್ಲಿ ಮುಖ್ಯಮಂತ್ರಿ ನಿವಾಸ,ಗೃಹಸಚಿವರ ನಾಸ ಮುಂದೆ ಪ್ರತಿಭಟನೆ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.
ಪೋಲಿಸ್ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ತಂಡದ ಸದಸ್ಯರು,ಮಾನವಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು,ಗೌಡ ಸಮುದಾಯದ ಸದಸ್ಯರು, ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಪೋಲಿಸರು ಭದ್ರತೆಯನ್ನು ಒದಗಿಸಿದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …