ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ

January 22, 2020
10:37 PM

ಮಂಗಳೂರು :  ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ.

Advertisement
Advertisement
Advertisement
Advertisement
Advertisement

ಗ್ರಾಮ ಪಂಚಾಯತ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು ಕ್ರಮ ಕೈಗೊಂಡಿದ್ದರೂ,  ಕೆಲವೇ ಪಡಿತರ ಚೀಟಿದಾರರು ಮಾತ್ರ ಬಿಪಿಎಲ್ ಪಡಿತರ ಚೀಟಿಯನ್ನು ಕಚೇರಿಗೆ ಹಾಜರು ಪಡಿಸಿರುತ್ತಾರೆ. ಆದಾಗ್ಯೂ ಇನ್ನೂ ನಿಗದಿತ ಮಾನದಂಡಗಳ ಹೊರತಾಗಿ ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವಾಹನಗಳ ಮಾಲಿಕತ್ವದ ಬಗ್ಗೆ ಆರ್‍ಟಿಓ ಡಾಟಾ,  ಖಾಸಗಿ/ಸರಕಾರಿ/ನಿಗಮ/ಮಂಡಳಿಗಳ ಸಿಬ್ಬಂದಿಗಳ ಮಾಹಿತಿಯನ್ನು ಪಡೆದು, ಪಡಿತರ ಚೀಟಿಯೊಂದಿಗೆ ಜೋಡಣೆಯಾಗಿರುವ ಆಧಾರ್ ಸಂಖ್ಯೆಯನ್ನು ತಾಳೆ ನೋಡುವುದು,  ಕಟ್ಟಡ/ಭೂಮಿ ವಿಸ್ತೀರ್ಣದ ವಿವರದ ಬಗ್ಗೆ ಸಂಬಂಧ ಪಟ್ಟಕಚೇರಿಯಿಂದ ಮಾಹಿತಿ ಪಡೆದುಕೊಳ್ಳುವುದು ಇವೇ ಮುಂತಾದ ಕ್ರಮ ಕೈಗೊಳ್ಳಲಾಗುವುದು.

Advertisement

ಈ ಸಂದರ್ಭದಲ್ಲಿ ಕಂಡು ಬಂದ ಅನರ್ಹ ಪಡಿತರ ಚೀಟಿದಾರರ ವಿರುದ್ಧದ ಕರ್ನಾಟಕ (ರೇಷನ್ ಕಾರ್ಡ್ ಅನಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಗಟ್ಟುವುದು) ಆದೇಶ 1977 ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಆದುದರಿಂದ ಯಾರು ಅನರ್ಹ ಪಡಿತರ ಚೀಟಿ ಹೊಂದಿರುತ್ತಾರೆಯೋ ಅಂತಹವರು ಕೂಡಲೇ ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ತಾಲೂಕು ಕಚೇರಿಗೆ ಹಾಜರುಪಡಿಸುವಂತೆ ತಹಶೀಲ್ದಾರರು, ಮಂಗಳೂರು ತಾಲೂಕು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror