ಅನ್ ಲಾಕ್-2.0 | ಗರೀಬ್ ಕಲ್ಯಾಣ್ ಯೋಜನೆ ಮುಂದಿನ 5 ತಿಂಗಳವರೆಗೆ ವಿಸ್ತರಣೆ | ಲಾಕ್ಡೌನ್​ ಸಡಿಲಿಕೆ ವೇಳೆ ನಿರ್ಲಕ್ಷ್ಯ ಬೇಡ | ಪ್ರಧಾನಿ ನರೇಂದ್ರ ಮೋದಿ ಕರೆ

June 30, 2020
5:34 PM

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹರಡುವುದು ತಡೆಗೆ ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ವಿವಿಧ ಕ್ರಮಗಳ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಬಡವರು ಹಸಿವಿನಿಂದ ಬಳಲಬಾರದು ಎಂಬ ಕಾರಣದಿಂದ  ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ತಿಂಗಳವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

Advertisement
Advertisement

ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಕೆಲವು ತಿಂಗಳುಗಳಿಂದ ದೇಶದಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹಾಗೂ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರದಿಂದ ಹಣವನ್ನು ಜಮೆ ಮಾಡಲಾಗಿದೆ. ಇದೀಗ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಮತ್ತು ಗೋಧಿ ಹಾಗೂ 1 ಕೆಜಿ ಬೇಳೆಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ   ಎಂದರು.

ಜೂನ್​ 1 ರಿಂದ ದೇಶದಲ್ಲಿ  ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ.  ಅನ್​ಲಾಕ್​.1 ರಲ್ಲಿ ಹಂತಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಿಕೊಂಡು ಬರಲಾಯಿತು. ಆದರೆ, ಈ ವೇಳೆ ಜನರು ಹೆಚ್ಚು ನಿರ್ಲಕ್ಷತನ ತೋರಿದರು. ಸಾಮಾಜಿಕ ಅಂತರ ಮರೆತರು. ಇದಕ್ಕೂ ಮುನ್ನ ನಾವು ಜನರಿಗೆ ಮಾಸ್ಕ್​ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುಂತೆ ಹಾಗೂ ದಿನದಲ್ಲಿ ಹಲವು ಬಾರಿ 20 ಸೆಕೆಂಡ್ ಕೈ ತೊಳೆದುಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಿದ್ದೆವು. ಆದರೆ, ಜನರು ಇವುಗಳನ್ನು ಸರಿಯಾಗಿ ಪಾಲನೆ ಮಾಡಲೇ ಇಲ್ಲ ಎಂದು ಪ್ರಧಾನಿಗಳು ವಿಷಾದ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್​ ಝೋನ್​ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.ದೇಶದಲ್ಲಿ ಮತ್ತೆ ಲಾಕ್​ಡೌನ್​ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ  ಪ್ರಧಾನಿಗಳು ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group