ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹರಡುವುದು ತಡೆಗೆ ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ವಿವಿಧ ಕ್ರಮಗಳ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡವರು ಹಸಿವಿನಿಂದ ಬಳಲಬಾರದು ಎಂಬ ಕಾರಣದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ತಿಂಗಳವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಘೋಷಿಸಿದ್ದಾರೆ.
ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ತಿಂಗಳುಗಳಿಂದ ದೇಶದಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹಾಗೂ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರದಿಂದ ಹಣವನ್ನು ಜಮೆ ಮಾಡಲಾಗಿದೆ. ಇದೀಗ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಮತ್ತು ಗೋಧಿ ಹಾಗೂ 1 ಕೆಜಿ ಬೇಳೆಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ ಎಂದರು.
ಜೂನ್ 1 ರಿಂದ ದೇಶದಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಅನ್ಲಾಕ್.1 ರಲ್ಲಿ ಹಂತಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡಿಕೊಂಡು ಬರಲಾಯಿತು. ಆದರೆ, ಈ ವೇಳೆ ಜನರು ಹೆಚ್ಚು ನಿರ್ಲಕ್ಷತನ ತೋರಿದರು. ಸಾಮಾಜಿಕ ಅಂತರ ಮರೆತರು. ಇದಕ್ಕೂ ಮುನ್ನ ನಾವು ಜನರಿಗೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುಂತೆ ಹಾಗೂ ದಿನದಲ್ಲಿ ಹಲವು ಬಾರಿ 20 ಸೆಕೆಂಡ್ ಕೈ ತೊಳೆದುಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಿದ್ದೆವು. ಆದರೆ, ಜನರು ಇವುಗಳನ್ನು ಸರಿಯಾಗಿ ಪಾಲನೆ ಮಾಡಲೇ ಇಲ್ಲ ಎಂದು ಪ್ರಧಾನಿಗಳು ವಿಷಾದ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್ ಝೋನ್ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.ದೇಶದಲ್ಲಿ ಮತ್ತೆ ಲಾಕ್ಡೌನ್ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಧಾನಿಗಳು ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …