ಅಪ್ಪಚ್ಚುರಂಜನ್‍ ಅವರಿಗೆ ಸಚಿವ ಸ್ಥಾನ ನೀಡಲು ಸೋಮವಾರಪೇಟೆ ಬಿಜೆಪಿ ಆಗ್ರಹ

August 21, 2019
10:13 PM

ಮಡಿಕೇರಿ :ಐದು ಬಾರಿ ಶಾಸಕರಾಗಿ ಜಿಲ್ಲೆಯ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಜನಮೆಚ್ಚುಗೆ ಗಳಿಸಿರುವ ಮಡಿಕೇರಿ ವಿಧಾನಾಸಭಾ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಸೋಮವಾರಪೇಟೆ ನಗರ ಬಿಜೆಪಿ ಅಧ್ಯಕ್ಷ ಎಸ್.ಆರ್.ಸೋಮೇಶ್ ಹೇಳಿದ್ದಾರೆ.

ಹೊರ ಜಿಲ್ಲೆಯ ಸಚಿವರಿಗೆ ಉಸ್ತುವಾರಿ ಜವಾಬ್ದಾರಿ ನೀಡಿದರೆ ಕೊಡಗಿನ ಸಮಸ್ಯೆಗಳು ಸುಲಭವಾಗಿ ಅರ್ಥವಾಗುವುದಿಲ್ಲವೆಂದ ಅವರು, ಎರಡು ವರ್ಷಗಳ ಕಾಲ ಜಿಲ್ಲೆಯನ್ನು ಕಾಡಿದ ಅತಿವೃಷ್ಟಿ ಪರಿಸ್ಥಿತಿಯನ್ನು ಶಾಸಕ ಅಪ್ಪಚ್ಚುರಂಜನ್ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು. ಕಳೆದ ವರ್ಷ ವಿದೇಶದಲ್ಲಿದ್ದ ಶಾಸಕರು ಮಹಾಮಳೆಯಿಂದ ಜಿಲ್ಲೆ ಸಂಕಷ್ಟದಲ್ಲಿದೆ ಎಂದು ಮಾಹಿತಿ ದೊರೆತ ತಕ್ಷಣ ಮರಳಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಪಕ್ಷನಿಷ್ಠೆ ಮತ್ತು ಜನಪರ ಕಾಳಜಿ ಹೊಂದಿರುವ ಅಪ್ಪಚ್ಚುರಂಜನ್‍ರಿಗೆ ಮೊದಲ ಸುತ್ತಿನಲ್ಲೇ ಸಚಿವ ಸ್ಥಾನ ಸಿಗಲಿದೆ ಎನ್ನುವ ನಿರೀಕ್ಷೆಗಳಿತ್ತು. ಆದರೆ ನಿರೀಕ್ಷೆ ಹುಸಿಯಾಗಿರುವುದರಿಂದ ಬೇಸರವಾಗಿದೆ ಎಂದು ತಿಳಿಸಿದ ಸೋಮೇಶ್, ಮುಂದೆ ಸಚಿವ ಸಂಪುಟ ವಿಸ್ತರಿಸುವ ಸಂದರ್ಭ ಮುಖ್ಯಮಂತ್ರಿಗಳು ಶಾಸಕರ ಅನುಭವ ಮತ್ತು ಹಿರಿತನವನ್ನು ಗಮನಿಸಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ವರದಾ, ತಾಲೂಕು ಪ್ರಧಾನ ಕಾರ್ಯದರ್ಶಿ ಮನುರೈ, ಉಪಾಧ್ಯಕ್ಷ ಹರಗ ಉದಯ, ಯುವ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಕಿಬ್ಬೆಟ್ಟ ಮಧು ಹಾಗೂ ಪ್ರಧಾನ ಕಾರ್ಯದರ್ಶಿ ವಿ.ಸಿ.ಶರತ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror