ಪುತ್ತೂರು: ಸುಳ್ಯ ತಾಲೂಕು ಏನೆಕಲ್ಲು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಯಾರು ಇಲ್ಲದ ಸಮಯ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಸುಳ್ಯ ತಾಲೂಕು ಚತ್ರಪ್ಪಾಡಿಯ ಯತೀಶ ಎಂಬುವವರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿ ಪರವಾಗಿ 2019 ಅ.30 ರಂದು ಜಾಮೀನಿ ಅರ್ಜಿ ಸಲ್ಲಿಸಿದ್ದು ಪುತ್ತೂರಿನ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜಾಮಿನು ಮಂಜೂರುಗೊಳಿಸಿ ಆದೇಶಿಸಿದೆ.
ಆರೋಪಿ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್, ಜುಬೇದ ಸರಳಿಕಟ್ಟೆ ಮತ್ತು ಚೇತನಾ ವಿ.ಎನ್ ವಾದಿಸಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…