ಮಂಗಳೂರು : ದ.ಕ ಜಿಲ್ಲೆ ಉಳ್ಳಾಲದ ವೀರ ರಾಣಿ ಅಬ್ಬಕ್ಕ ಉತ್ಸವವನ್ನು 2020ರ ಫೆಬ್ರವರಿ ತಿಂಗಳಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದೆ. ಅಬ್ಬಕ್ಕ ಉತ್ಸವ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳು ಮತ್ತು ನಿರೀಕ್ಷಿಸುವ ಸಂಭಾವನೆ ವಿವರಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್, ಮಂಗಳೂರು ಇವರಿಗೆ ಫೆಬ್ರವರಿ 10 ರೊಳಗೆ ಸಲ್ಲಿಸಬೇಕು.
ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜ್ಯದ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಅಬ್ಬಕ್ಕ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕೃತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…