ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

October 9, 2019
7:51 PM

ಸುಳ್ಯ: ಕಟ್ಟೆಕ್ಕಾರ್ ಅಬ್ಬಾಸ್ ಹಾಜಿಯವರು ಸರ್ವರಿಗೂ ಆದರ್ಶಪ್ರಾಯರಾಗಿದ್ದವರು. ಅವರ ಅಗಲಿಕೆ ಸುಳ್ಯಕ್ಕೆ ತುಂಬಲಾರದ ನಷ್ಟ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದ್ದಾರೆ.

ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಹಾಗು ನಾಗರಿಕರ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಿಧನರಾದ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ಸ್ಮರಣಾರ್ಥ ನಡೆದ ಸಾರ್ವಜನಿಕ ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು.
ಶಿಕ್ಷಣಕ್ಕೆ ಅತ್ಯಂತ ಹೆಚ್ಚು ಮಹತ್ವ ನೀಡುತ್ತಿದ್ದ ಅಬ್ಬಾಸ್ ಹಾಜಿಯವರು ಎಲ್ಲಾ ಸಂಘ ಸಂಸ್ಥೆಗಳಿಗೂ ಪ್ರೋತ್ಸಾಹ ನೀಡುತ್ತಿದ್ಸರು.
ಅಬ್ಬಾಸ್ ಹಾಜಿಯವರ ಉಪಸ್ಥಿತಿಯೇ ನಮಗೆಲ್ಲ ದೊಡ್ಡ ಶಕ್ತಿ ನೀಡುತ್ತಿತ್ತು. ಅವರ ಹೆಸರು ಅಜರಾಮರಾಗಿರಲಿ ಎಂದು ಡಾ.ಚಿದಾನಂದ ನುಡಿನಮನ ಸಲ್ಲಿಸಿದರು.
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ, ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಭಾನುಪ್ರಕಾಶ್, ಸುಳ್ಯ ರೋಟರಿ ಕ್ಲಬ್ ಕಾರ್ಯದರ್ಶಿ ಸನತ್, ಪಯಸ್ವಿನಿ ಜೇಸೀಸ್ ಅಧ್ಯಕ್ಷ ತೀರ್ಥವರ್ಣ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ.ಮಾಜಿ ಸದಸ್ಯ ಕೆ.ಎಂ,ಮುಸ್ತಫಾ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ, ಎನ್.ಎ.ಜಿತೇಂದ್ರ, ಮಾಜಿ ಕಾರ್ಯದರ್ಶಿ ಗಿರಿಜಾಶಂಕರ ತುದಿಯಡ್ಕ, ಅನ್ಸಾರ್ ಅಧ್ಯಕ್ಷ ಅಬ್ದುಲ್ ಶುಕ್ಕೂರ್, ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷ ಅಬ್ದುಲ್ ಮಜೀದ್, ವರ್ತಕರ ಸಂಘದ ಕಾರ್ಯದರ್ಶಿ ಡಿ.ಎಸ್‌.ಗಿರೀಶ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ‌‌.ಜ್ಞಾನೇಶ್ ಮತ್ತಿತರರು ನುಡಿನಮನ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror