ಸುಳ್ಯ: ಕಟ್ಟೆಕ್ಕಾರ್ ಅಬ್ಬಾಸ್ ಹಾಜಿಯವರು ಸರ್ವರಿಗೂ ಆದರ್ಶಪ್ರಾಯರಾಗಿದ್ದವರು. ಅವರ ಅಗಲಿಕೆ ಸುಳ್ಯಕ್ಕೆ ತುಂಬಲಾರದ ನಷ್ಟ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದ್ದಾರೆ.
ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಹಾಗು ನಾಗರಿಕರ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಿಧನರಾದ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ಸ್ಮರಣಾರ್ಥ ನಡೆದ ಸಾರ್ವಜನಿಕ ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು.
ಶಿಕ್ಷಣಕ್ಕೆ ಅತ್ಯಂತ ಹೆಚ್ಚು ಮಹತ್ವ ನೀಡುತ್ತಿದ್ದ ಅಬ್ಬಾಸ್ ಹಾಜಿಯವರು ಎಲ್ಲಾ ಸಂಘ ಸಂಸ್ಥೆಗಳಿಗೂ ಪ್ರೋತ್ಸಾಹ ನೀಡುತ್ತಿದ್ಸರು.
ಅಬ್ಬಾಸ್ ಹಾಜಿಯವರ ಉಪಸ್ಥಿತಿಯೇ ನಮಗೆಲ್ಲ ದೊಡ್ಡ ಶಕ್ತಿ ನೀಡುತ್ತಿತ್ತು. ಅವರ ಹೆಸರು ಅಜರಾಮರಾಗಿರಲಿ ಎಂದು ಡಾ.ಚಿದಾನಂದ ನುಡಿನಮನ ಸಲ್ಲಿಸಿದರು.
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ, ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಭಾನುಪ್ರಕಾಶ್, ಸುಳ್ಯ ರೋಟರಿ ಕ್ಲಬ್ ಕಾರ್ಯದರ್ಶಿ ಸನತ್, ಪಯಸ್ವಿನಿ ಜೇಸೀಸ್ ಅಧ್ಯಕ್ಷ ತೀರ್ಥವರ್ಣ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ.ಮಾಜಿ ಸದಸ್ಯ ಕೆ.ಎಂ,ಮುಸ್ತಫಾ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ, ಎನ್.ಎ.ಜಿತೇಂದ್ರ, ಮಾಜಿ ಕಾರ್ಯದರ್ಶಿ ಗಿರಿಜಾಶಂಕರ ತುದಿಯಡ್ಕ, ಅನ್ಸಾರ್ ಅಧ್ಯಕ್ಷ ಅಬ್ದುಲ್ ಶುಕ್ಕೂರ್, ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷ ಅಬ್ದುಲ್ ಮಜೀದ್, ವರ್ತಕರ ಸಂಘದ ಕಾರ್ಯದರ್ಶಿ ಡಿ.ಎಸ್.ಗಿರೀಶ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಮತ್ತಿತರರು ನುಡಿನಮನ ಸಲ್ಲಿಸಿದರು.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…