Advertisement
ಕಾರ್ಯಕ್ರಮಗಳು

ಅಭಯದಾನ ಶ್ರೇಷ್ಠದಾನ :ಇಡೀ ವಿಶ್ವವೇ ಧರ್ಮಸ್ಥಳವಾಗಬೇಕು

Share

ಉಜಿರೆ: ಧರ್ಮಸ್ಥಳದಲ್ಲಿ ಅನ್ನದಾನ, ಔಷಧಿದಾನ, ವಿದ್ಯಾದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದು, ನೊಂದು ಬಂದವರಿಗೆ ಸಾಂತ್ವನ ಹೇಳಿ ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿಸುವ ಅಭಯದಾನ ಅತ್ಯಂತ ಶ್ರೇಷ್ಠ ಹಾಗೂ ವಿಶಿಷ್ಠ ದಾನವಾಗಿದೆ. ಶ್ರೀ ಮಂಜುನಾಥ ಸ್ವಾಮಿ ಧರ್ಮಾಧಿಕಾರಿಗಳಾದ “ಹೆಗ್ಗಡೆ”ಯವರಿಗೆ ನೀಡಿದ ವಿಶೇಷ ಅನುಗ್ರಹ ಇದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಧರ್ಮಸ್ಥಳದ ತೀರ್ಮಾನವೇ ಅಂತಿಮವಾಗಿದೆ. ವ್ಯವಹಾರದಲ್ಲಿ ನಷ್ಟ, ಶಾಪ ದೋಷ, ವಾಕ್‍ದೋಷ, ಕೌಟುಂಬಿಕ ಕಲಹ, ವ್ಯಾಪಾರದಲ್ಲಿ ಸೋಲು, ಮನಸ್ತಾಪ, ದೈವ – ಪ್ರೇತಗಳ ಬಾಧೆ, ಇತ್ಯಾದಿಗಳಿಂದ ನೊಂದವರು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಲ್ಲಿ ನಿವೇದನೆ ಮಾಡಿಕೊಂಡಾಗ, ಶ್ರೀ ಸ್ವಾಮಿಗೆ ಶರಣಾಗಿ, ಹೆದರಬೇಡಿ, ಧೈರ್ಯವಾಗಿರಿ ಎಂದು ಅವರಿಗೆ ಸಾಂತ್ವನ ಹೇಳಿ ಹೆಗ್ಗಡೆಯವರು ಅಭಯ ನೀಡುತ್ತಾರೆ. ಜನರಿಗೆ ಬದುಕು ಕಟ್ಟಿಕೊಳ್ಳಲು ಪ್ರೇರಣೆ, ಮಾರ್ಗದರ್ಶನ ನೀಡುತ್ತಾರೆ. ಇದು “ಹೆಗ್ಗಡೆ” ಪೀಠಕ್ಕೆ ಶ್ರೀ ಮಂಜುನಾಥ ಸ್ವಾಮಿ ನೀಡಿದ ವಿಶೇಷ ಅನುಗ್ರಹವಾಗಿದೆ ಎಂದು ಅವರು ತಿಳಿಸಿದರು.

ಅವರವರ ವೃತ್ತಿ, ಪ್ರವೃತ್ತಿಯನ್ನು ಪ್ರೀತಿಸಿ, ಗೌರವಿಸಿದಾಗ ಬದುಕು ಪ್ರಿಯವಾಗುತ್ತದೆ, ಸುಂದರವಾಗುತ್ತದೆ ಹಾಗೂ ಹಗುರವಾಗುತ್ತದೆ. ಕಷ್ಟಗಳು ಬಂದಾಗ ಒತ್ತಡ ಹೆಚ್ಚಾದಾಗ ಬದುಕು ಭಾರವಾಗುತ್ತದೆ. ಧರ್ಮದ ಮೂಲ ಉದ್ದೇಶವೇ ಬದುಕನ್ನು ಸುಖ-ಶಾಂತಿಯಿಂದ, ಪ್ರೀತಿ-ವಿಶ್ವಾಸದಿಂದ ಅನುಭವಿಸಲು ಪ್ರೇರಣೆ ನೀಡುವುದೇ ಆಗಿದೆ. ಆದುದರಿಂದಲೇ ಖ್ಯಾತಗಾಯಕ ರವೀಂದ್ರಜೈನ್ ಧರ್ಮಸ್ಥಳದಲ್ಲಿ ನಡೆದ ಮೊದಲ ಬಾಹುಬಲಿ ಮಹಾ ಮಸ್ತಕಾಭಿಷೇಕ ಸಂದರ್ಭದಲ್ಲಿ “ಸಾರೀ ದುನಿಯಾ ಧರ್ಮಸ್ಥಳ್ ಹೋ” ಎಂದುಆಶಯ ವ್ಯಕ್ತಪಡಿಸಿದ ಹಾಡನ್ನು ಹಾಡಿದರು. ಎಲ್ಲರೂ ಪರಸ್ಪರ ಪ್ರೀತಿ-ವಿಶ್ವಾಸದಿಂದ, ಸೇವಾ ಮನೋಭಾವದಿಂದ ಜೊತೆಯಾಗಿ ಸಾಗಿದರೆ ದೇವರು ಸದಾ ಪರೋಕ್ಷವಾಗಿ ನಮ್ಮ ಜೊತೆ ಇದ್ದು ನಾವು ದೇವರನ್ನು ಸ್ಪರ್ಶಿಸಬಹುದು. ಅನುಭವಿಸಿ ಆನಂದಿಸಬಹುದು. ಇದಕ್ಕಾಗಿ ಎಲ್ಲರಲ್ಲಿ ಶುದ್ಧಚಾರಿತ್ರ್ಯ, ಆತ್ಮ ವಿಶ್ವಾಸ ನಂಬಿಕೆ, ಪ್ರೀತಿ-ವಿಶ್ವಾಸ, ಸೇವಾ ಮನೋಭಾವ ಇರಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ನಿರಂತರ ಪರಿವರ್ತನಾಶೀಲವಾದ ಜಗತ್ತಿನಲ್ಲಿ ನಾವು ಸಂದರ್ಭಕ್ಕೆ ಹಾಗೂ ಕಾಲಕ್ಕೆ ಸರಿಯಾಗಿ ಹೊಂದಿಕೊಂಡು ಆದರ್ಶ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಹೊಗಳಿಕೆಗೆ ಹಿಗ್ಗಬೇಡಿ, ತೆಗಳಿಕೆಗೆ ಕುಗ್ಗಬೇಡಿ. ಎಲ್ಲವನ್ನೂಆತ್ಮವಿಶ್ವಾಸದಿಂದ ಮತ್ತು ಸಮಚಿತ್ತದಿಂದ ಸ್ವೀಕರಿಸಿ ಆದರ್ಶಜೀವನ ನಡೆಸಿ ಎಂದು ಸಲಹೆ ನೀಡಿದ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಮತ್ತು ಜನರ ಪ್ರೀತಿ– ವಿಶ್ವಾಸದಿಂದ ಇನ್ನಷ್ಟು ಹೆಚ್ಚು ಸೇವಾಕಾರ್ಯಗಳನ್ನು ಮಾಡಿ ಬೆಳ್ತಂಗಡಿ ತಾಲ್ಲೂಕನ್ನು ಮಾದರಿ ತಾಲ್ಲೂಕಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೆಗ್ಗಡೆಯವರು ಭರವಸೆ ನೀಡಿದರು.

ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಹರೀಶ್‍ಕುಮಾರ್, ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಉಪಸ್ಥಿತರಿದ್ದರು. ಪ್ರೊ.ಎಸ್. ಪ್ರಭಾಕರ್, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಇದ್ದರು. ಕೆ.ಪ್ರತಾಪಸಿಂಹ ನಾಯಕ್  ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ್‍ರಾವ್ ಧರ್ಮಸ್ಥಳ ಕೊನೆಯಲ್ಲಿ ಧನ್ಯವಾದವಿತ್ತರು.

ವಸ್ತುಪ್ರದರ್ಶನ ಉದ್ಘಾಟನೆ: ಕನ್ನಡ ಮಾಧ್ಯಮ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು. ಎಸ್.ಡಿ.ಎಮ್.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್. ಪ್ರಭಾಕರ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ವಸ್ತುಪ್ರದರ್ಶನದಲ್ಲಿ 197 ಮಳಿಗೆಗಳಿದ್ದು ಪ್ರತಿ ದಿನ ಬೆಳಿಗ್ಗೆ ಗಂಟೆ 9.00 ರಿಂದ ರಾತ್ರಿ 9.00 ಗಂಟೆ ವರೆಗೆ ಉಚಿತ ಪ್ರವೇಶಾವಕಾಶವಿದೆ. ರಾತ್ರಿ ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆಉತ್ಸವ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

5 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

18 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago