ಅಮಾಯಕನ ಮೇಲೆ ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಆರೋಪ : ಇಲಾಖೆಯಿಂದ ಆರೋಪ ನಿರಾಕರಣೆ

September 20, 2019
10:28 AM

ಸುಬ್ರಹ್ಮಣ್ಯ: ಅರಣ್ಯದಿಂದ ಮರ ಕಳವು ಆಗಿರುವ ಬಗ್ಗೆ ಅಮಾಯಕ ವ್ಯಕ್ತಿಯ ಮೇಲೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಸಿಬಂದಿಗಳು ಹಲ್ಲೆ ನಡೆಸಿರುವ ಬಗ್ಗೆ ಇದೀಗ ತೀವ್ರ ಚರ್ಚೆಯಾಗುತ್ತಿದೆ. ಹಲ್ಲೆಯಿಂದ ಗಾಯಗೊಳಗಾಗಿರುವ ವ್ಯಕ್ತಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ನೀತಿ ತಂಡವು ಈ ಘಟನೆಯನ್ನು  ಖಂಡಿಸಿದ್ದು ಮಾನವಹಕ್ಕುಗಳ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದೆ.

Advertisement
Advertisement

Advertisement

 

 

Advertisement

 

Advertisement

ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಿಂದ ಹೆಬ್ಬಲಸು ಮರ ಕಳವಾಗಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿ ಲೋಕೇಶ್ ಎಂಬವರನ್ನು  ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು 25 ಸಾವಿರ ರಶೀದಿ ಸಹಿತ ದಂಡ ಪಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಲೋಕೇಶ್ ಅಮಾಯಕನಾಗಿದ್ದು ಈ ಪ್ರಕರಣದಲ್ಲಿ ಮರ ಕಳ್ಳತನದಲ್ಲಿ ಭಾಗಿಯಾಗಿರಲಿಲ್ಲ ಎಂದು ಈಗ ಹೇಳಲಾಗಿದೆ. ಅರಣ್ಯದಲ್ಲಿ ಯಾರೋ ಕದ್ದುಕೊಂಡು ಹೋದ ಪ್ರಕರಣದಲ್ಲಿ ಲೋಕೇಶ ಅವರೇ ಕದ್ದಿದ್ದಾರೆ ಎಂದು ಹೇಳುವುದ ಸರಿಯಲ್ಲ ಎಂಬ ವಾದವಾದರೆ ಅರಣ್ಯ ಇಲಾಖೆಯ ಸಿಬಂದಿಗಳು ಹಲ್ಲೆ ನಡೆಸಿದ್ದೂ ಅಲ್ಲದೆ ಖಾಲಿ ಪೇಪರಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ದೂರಲಾಗಿದೆ. ಇದೂ ಅಲ್ಲದೆ ಯಾವುದೇ ಪ್ರಕರಣ ದಾಖಲಿಸದೆ 25 ಸಾವಿರ ದಂಡ ಯಾವ ಕಾರಣಕ್ಕೆ ಎಂಬುದು ಪ್ರಶ್ನೆಯಾಗಿದೆ. ಇದೀಗ ಹಲ್ಲೆಗೊಳಗಾಗಿರುವ ಲೋಕೇಶ್ ಅವರಿಗೆ ಗಾಯವಾಗಿದ್ದು ಮೂತ್ರ ಕೋಶದ ಮೇಲೆ ಸಮಸ್ಯೆಯಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.ನೀತಿ ತಂಡವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಮಾನವಹಕ್ಕುಗಳ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ.

ಇದೇ ವೇಳೆ ಅರಣ್ಯ ಇಲಾಖೆಯು ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ. ಸಾಕ್ಷಿ ಆಧರಿಸಿಯೇ ಲೋಕೇಶ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ , ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ ಎಂದು  ಅರಣ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Advertisement

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror