ಸುಳ್ಯ: ಬಾಬರಿ ಮಸೀದಿ -ರಾಮಮಂದಿರ ವಿವಾದ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಬಂದಿರುವ ಹಿನ್ನಲೆಯಲ್ಲಿ ತೀರ್ಪಿನ್ನು ಗೌರವಿಸಿ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಸುಳ್ಯ ತಾಲೂಕಿನ ಎಲ್ಲಾ ಮೊಹಲ್ಲಾಗಳು ಮತ್ತು ಜಮಾಅತ್ ವ್ಯಾಪ್ತಿಗಳಲ್ಲಿ ಜಾಗೃತಿ ಮೂಡಿಸುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿರುವ, ಪ್ರಮುಖ ವಾಣಿಜ್ಯ ಕೇಂದ್ರವೂ ಆಗಿರುವ ಪ್ರಸಿದ್ಧ ಧಾರ್ಮಿಕ ಕೇಂದ್ರಗಳನ್ನು ಹೊಂದಿರುವ ಸುಳ್ಯವು ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಜಾತಿ, ಪಕ್ಷ ಬೇಧವಿಲ್ಲದೆ ಪರಸ್ಪರ ಪ್ರೀತಿ ವಿಶ್ವಾಸದಿಂದ ನಡೆಯುತ್ತಿರುವ ಸುಳ್ಯ ತಾಲೂಕು ಮುಂದೆಯೂ ಅದೇ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯು ತಮ್ಮ ಜಮಾಅತ್‌ನಲ್ಲಿ ಬಾಬರಿ ಮಸೀದಿ, ರಾಮಮಂದಿರ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಬೇಕು. ಆ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು. ಶಾಂತಿ ಸೌಹಾರ್ದತೆ, ಸಾಮರಸ್ಯ ಹಾಗೂ ಭಾವೈಕ್ಯತೆಯ ಸಂದೇಶ ಸಾರಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫರವರ ಜನ್ಮದಿನಾಚರಣೆಯನ್ನು ಆಚರಿಸುವ ರಬೀವುಲ್ ಔವ್ವಲ್ ತಿಂಗಳಲ್ಲಿ ಪ್ರವಾದಿ ಆದರ್ಶದೊಂದಿಗೆ ನಾವು ಇತರರಿಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ಸಮಿತಿ ಸದಸ್ಯ ಕೆ.ಎಂ.ಮುಸ್ತಫಾ, ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ, ಉಪಾಧ್ಯಕ್ಷರುಗಳಾದ ಪಿ.ಎ.ಮಹ್ಮದ್, ಇಕ್ಬಾಲ್ ಎಲಿಮಲೆ, ಕೋಶಾಧಿಕಾರಿ ಎಸ್.ಎ.ಮೊಯಿದ್ದೀನ್, ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉಪಸ್ಥಿತರಿದ್ದರು.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…