ಶತಮಾನದ ವಿವಾದಕ್ಕೆ ಇಂದು ತೆರೆ ಬೀಳಲಿದೆ. ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ಇಂದು 10.30ಕ್ಕೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ತೀರ್ಪಿನ ಬಳಿಕ ಸಾಮರಸ್ಯದ ಪರ್ವ ದೇಶದಲ್ಲಿ ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಈಗ ಭರವಸೆ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯ ಈ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ 1885 ರಲ್ಲಿ ಮೊದಲ ಬಾರಿಗೆ ಚರ್ಚೆ ಆರಂಭವಾಗಿತ್ತು. ಹೀಗಾಗಿ ಸುಮಾರು 135 ವರ್ಷ ವರ್ಷಗಳಿಂದಲೂ ಈ ವಿವಾದ ನಡೆಯುತ್ತಿದ್ದರೂ, ಸದ್ಯ ಸುಮಾರು 70 ವರ್ಷಗಳಿಂದ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯುತ್ತಿದೆ.
ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ.ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ. ಈ ಪ್ರಕರಣದ ಸಂಬಂಧ 40 ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿದ್ದ ಪೀಠವು ಪ್ರಕಟಿಸುವ ತೀರ್ಪು ಮಹತ್ವ ಪಡೆದಿದೆ.
ಈ ಹಿಂದೆ 2010 ರಲ್ಲಿ ಅಲಹಬಾದ್ ಹೈಕೋರ್ಟ್, ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಹಾಗೂ ರಾಮ್ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್ ಹೈಕೋರ್ಟ್ ಆದೇಶಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆದಿತ್ತು.
ವಿವಾದದ ಸಂಕ್ಷಿಪ್ತ ವಿವರ :
ಅಯೋಧ್ಯೆಯು ಹಿಂದೂ ಆರಾಧ್ಯ ದೇವರು ರಾಮನ ಜನ್ಮಭೂಮಿ. ಇಲ್ಲಿ ರಾಮನ ದೇವಸ್ಥಾನವೂ ಇದೆ ಎಂಬುದು ನಂಬಿಕೆ ಹಾಗೂ ಪುರಾಣಗಳ ಉಲ್ಲೇಖ. ಆದರೆ ಮೊಘಲ್ ದೊರೆ ಬಾಬರ್ 1528 ರಲ್ಲಿ ಈ ದೇವಸ್ಥಾನದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದು ಇದು ಬಾಬರೀ ಮಸೀದಿ ಎಂದು ಹೇಳಲಾಗುತ್ತದೆ. ಈ ಪ್ರದೇಶವು ಉತ್ತರ ಪ್ರದೇಶ ರಾಜ್ಯದ ಫೈಜಾಬಾದ್ ಜಿಲ್ಲೆಯಲ್ಲಿದೆ. ಈ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಹಾಗೂ ಮಸೀದಿ ಮತ್ತು ಜಾಗಕ್ಕೆ ಸಂಬಂಧಿಸಿ ವಿವಾದ ಆರಂಭವಾಗಿತ್ತು. 1992 ರ ಡಿಸೆಂಬರ್ 6 ರಂದು ರಾಮ ಕರಸೇವಕರು ಈ ಮಸೀದಿ ಕೆಡವಿ ಹಾಕಿದರು. ಆ ಬಳಿಕವೂ 2.77 ಎಕರೆ ಭೂಮಿ ಇಷ್ಟು ವರ್ಷಗಳ ಕಾಲ ವಿವಾದದ ಕೇಂದ್ರಬಿಂದುವಾಗಿತ್ತು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490