ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ನೀಡಲು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ.
ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಂವಿಧಾನ ಪೀಠ ತನ್ನ ತೀರ್ಪು ಪ್ರಕಟಿಸುವ ವಿಷಯವನ್ನು ಸುಪ್ರೀಂಕೋರ್ಟ್ನ ಮೂಲಗಳು ಖಚಿತಪಡಿಸುತ್ತಲೇ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ಅಯೋಧ್ಯೆ ಸೇರಿದಂತೆ 78 ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ದೇಶದ ಎಲ್ಲಾ ಜನರು ಸುಪ್ರೀಂಕೋರ್ಟ್ ತೀರ್ಪನ್ನು ಸ್ವೀಕರಿಸಿ ದೇಶದಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಇದೀಗ ದಕ ಜಿಲ್ಲೆಯಲ್ಲೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ರಾಜ್ಯದ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲು ಸೂಚನೆ ನೀಡಲಾಗಿದೆ.ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಕೂಡಾ ನಿಗಾ ಇಡಲಾಗಿದೆ. ವಾಟ್ಸಪ್ ಗ್ರೂಪುಗಳಲ್ಲಿ ಎಡ್ಮಿನ್ ಮಾತ್ರವೇ ಪೋಸ್ಟ್ ಮಾಡುವಂತೆ ಸೆಟ್ಟಿಂಗ್ ಮಾಡಲಾಗುತ್ತಿದೆ.