ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel